ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಇಂದು ದೆಹಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.
ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಮಾಜಿ ಸಚಿವ ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ ಹಾಡಲು ಕೊನೆಗೂ ಸಂಧಾನ ಸೂತ್ರ ಸಿದ್ಧಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಿಧು ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ನಿವಾಸದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ನವಜೋತ್ ಸಿಂಗ್ ಸಿಧು ಭೇಟಿ ಮಾಡಿದ್ದಾರೆ.ಈ ವೇಳೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಕೂಡ ಉಪಸ್ಥಿತರಿದ್ದರು.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್‌ನಲ್ಲಿ ನಡೆಯುತ್ತಿರುವ ಭಿನ್ನಮತಕ್ಕೆ ಕೊನೆಗೂ ಪೂರ್ಣ ವಿರಾಮ ಬೀಳುವ ಸಾಧ್ಯತೆಯಿದೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೇಮಕ ಮಾಡಲು ಕಾಂಗ್ರೆಸ್ ವರಿಷ್ಠರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ