ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಕೆಸಿಆರ್ 500 ಕೋಟಿ ಡೀಲ್: ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಕೆಸಿಆರ್ 500 ಕೋಟಿ ಡೀಲ್: ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

Share

ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ರಾಜ್ಯ ಕಾಂಗ್ರೆಸ್ ನಾಯಕನಿಗೆ 500 ಕೋಟಿ ರೂಪಾಯಿ ಸುಪಾರಿ ನೀಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸುದ್ದಿಗೋಷ್ಠಿ ಇದೀಗ ದೇಶದಲ್ಲೇ ಭಾರಿ ತಲ್ಲಣ ಸೃಷ್ಟಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಕರ್ನಾಟಕದ ಕಾಂಗ್ರೆಸ್ ನಾಯಕನೊಬ್ಬನ ಕರೆಸಿ ಮೂರು ಮೂರು ಬಾರಿ ಮೀಟಿಂಗ್ ನಡೆಸಿದ್ದಾರೆ. ಇಷ್ಟೇ ಅಲ್ಲ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸೋಲಿಸಲು ಕೆಸಿಆರ್ ಸುಪಾರಿ ನೀಡಿದ್ದಾರೆ ಅನ್ನೋ ವಿಚಾರ ನನಗೆ ಗೊತ್ತಿಲ್ಲ. ಯಾರು ಯಾರನ್ನೂ ಬೇಕಾದರೂ ಭೇಟಿ ಮಾಡುತ್ತಾರೆ. ಕಾಂಗ್ರೆಸ್ ಸೋಲಿಸಿದರೆ ಕೆ ಚಂದ್ರಶೇಖರ್ ರಾವ್‌ಗೆ ಲಾಭ ಏನು? ಕೆಸಿಆರ್ ಅವರ ಹೋರಾಟ ಬಿಜೆಪಿ ವಿರುದ್ಧ. ಕಾಂಗ್ರೆಸ್ ವಿರುದ್ಧ ಅಲ್ಲ ಎಂದಿದ್ದಾರೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಯಾವ ಹಿನ್ನಲೆಯಲ್ಲಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ನನಗೆ ಜನತೆಯ ಆಶೀರ್ವಾದ, ನನಗೆ ಜನತೆಯ ಬೆಂಬಲ ಇದೆ. ಹೀಗಾಗಿ ಈ ವಿಚಾರಗಳ ಕುರಿತು ನಾನು ಗಮನ ಹರಿಸುವುದಿಲ್ಲ. ನನಗೆ ಹಣದ ಅವಶ್ಯಕತೆ ಇಲ್ಲ. ಕರ್ನಾಟಕದಲ್ಲಿ ಯಾತ್ರೆ ಮೂಲಕ ಸಂಚರಿಸುತ್ತಿದ್ದೇನೆ. ಅಭೂತಪೂರ್ವ ಯಶಸ್ಸು ಸಿಕ್ಕಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.   

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ರೇವಂತ್ ರೆಡ್ಡಿ ಅವರ ಆರೋಪದ ಬಗ್ಗೆ ವರದಿಗಳನ್ನು ಓದಿದ್ದೇನೆ ಮತ್ತು ಈ ವಿಷಯದ ಬಗ್ಗೆ ಸತ್ಯವನ್ನು ಖಚಿತಪಡಿಸಿಕೊಂಡ ನಂತರವೇ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು


Share