ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ವಿತರಣೆ, ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ವಿತರಣೆ, ಕಾರ್ಯಕ್ರಮ

Share

ಕುಮಟಾ :ತಾಲೂಕಿನ ಹಿರೇಗುತ್ತಿ10ನೇ ವರ್ಗದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಲು ಹಾಗೂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಲು, ವಿದ್ಯಾರ್ಥಿಗಳಲ್ಲಿ ದಿನಪತ್ರಿಕೆ ಓದುವ ಅಭಿರುಚಿ ಮೂಡಿಸಬೇಕೆಂಬ ಘನ ಉದ್ದೇಶದಿಂದ ಹಿರೇಗುತ್ತಿ ಗ್ರಾಮ ಪಂಚಾಯತ ವತಿಯಿಂದ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ನೀಡುತ್ತಿದ್ದೇವೆ’ ಎಂದು ಹಿರೇಗುತ್ತಿ ಗ್ರಾಮ ಪಂಚಾಯತ ಪಿ.ಡಿ.ಓ ವಿನಯಕುಮಾರ್ ನಾಯ್ಕ ಹೇಳಿದರು.ಅವರು ಹಿರೇಗುತ್ತಿ ಹೈಸ್ಕೂಲಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ವಿತರಣೆ ಕಾರ್ಯಕ್ರಮದಲ್ಲಿ ದಿನಪತ್ರಿಕೆ ವಿತರಣೆ ಮಾಡಿ ಮಾತನಾಡುತ್ತಾ “ವಿದ್ಯಾರ್ಥಿ ಜೀವನದಲ್ಲಿ ಎಸ್.ಎಸ್.ಎಲ್.ಸಿ ಎಂಬುದು ಉತ್ತಮ ಅಡಿಪಾಯವಿದ್ದ ಹಾಗೆ ಈ ದಿನಪತ್ರಿಕೆಯ ಸಹಾಯದಿಂದ ಉತ್ತಮ ಫಲಿತಾಂಶ ಪಡೆದು ಪಾಲಕರಿಗೆ, ಶಾಲೆಗೆ, ಊರಿಗೆ ಕೀರ್ತಿ ತನ್ನಿ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೈಸ್ಕೂಲ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕರು “ವಿಜಯ ಕರ್ನಾಟಕ ದಿನಪತ್ರಿಕೆ ಕರ್ನಾಟಕದಲ್ಲಿಯೇ ಅತ್ಯಂತ ಪ್ರಸಿದ್ಧ ದಿನಪತ್ರಿಕೆ ಆಗಿದೆ. ದಿನಪತ್ರಿಕೆ ದಿನಂಪ್ರತಿ ಓದುವ ಹವ್ಯಾಸ ಬೆಳೆಸಿಕೊಂಡರೆ ವಿದ್ಯಾರ್ಥಿಗಳ ಜ್ಞಾನಾರ್ಜನೆ ಜಾಸ್ತಿ ಆಗುತ್ತದೆ” ಎಂದರು.ಪ್ರಾಸ್ತಾವಿಕ ನುಡಿಗಳನ್ನಾಡಿದ ಶಿಕ್ಷಕ ನಾಗರಾಜ ಜಿ ನಾಯಕರವರು ವಿದ್ಯಾರ್ಥಿಗಳ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ವೃದ್ಧಿಸಲು ವಿಜಯ ಕರ್ನಾಟಕ ದಿನಪತ್ರಿಕೆ ರಜತ ಸಂಭ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಚಿಕೆ ನೀಡುತ್ತಿದೆ” ಎಂದರು.ಹೈಸ್ಕೂಲ್ ಮುಖ್ಯಾಧ್ಯಾಪಕ ರೋಹಿದಾಸ ಗಾಂವಕರ ಮಾತನಾಡಿ “ನಮ್ಮ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ನೀಡಲು ಕಾರಣೀಕರ್ತರಾದ ಹಿರೇಗುತ್ತಿ ಗ್ರಾಮ ಪಂಚಾಯತ ಅಧ್ಯಕ್ಷರಿಗೆ, ಪಿ.ಡಿ.ಓ ಹಾಗೂ ಸದಸ್ಯರಿಗೆ, ವಿಜಯ ಕರ್ನಾಟಕ ಸಿನಿಯರ್್ರ ಆಫೀಸರ್ ಬಸಯ್ಯ ಹಿರೇಮಠ ರವರಿಗೆ ಧನ್ಯವಾದ ತಿಳಿಸಿ ದಿನಪತ್ರಿಕೆ ಪ್ರಯೋಜನ ಪಡೆದುಕೊಳ್ಳಿ” ಎಂದರು.ಕಾರ್ಯಕ್ರಮ ವೇದಿಕೆಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಇಂಜಿನಿಯ‌ ಲೋಹಿತ್ ನಾಯ್ಕ ಕುಮಟಾ, ಹೈಸ್ಕೂಲ್ ಶಿಕ್ಷಕ ವೃಂದದವರು, ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.ಪ್ರಾರಂಭದಲ್ಲಿ ವಿದ್ಯಾರ್ಥಿಗಳಾದ ಸರಿತಾ ಸಂಗಡಿಗರ ಸ್ವಾಗತಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಎನ್.ವಿ.ಶ್ರೀನಾಗ ಸರ್ವರನ್ನು ಸ್ವಾಗತಿಸಿದರು. ನಿರೀಕ್ಷಾ ನಾಯಕ ಕಾರ್ಯಕ್ರಮ ನಿರ್ವಹಣೆ ಮಾಡಿದರು. ರಜತ ನಾಯಕ ವಂದಿಸಿದರು.


Share