ಕುಮಟಾ ಶಿರಸಿ ಹೆದ್ದಾರಿಯ ಹೊಂಡದಲ್ಲಿ ಮೀನು ಹಿಡಿದು ಪ್ರತಿಭಟನೆ

ಕುಮಟಾ ಶಿರಸಿ ಹೆದ್ದಾರಿಯ ಹೊಂಡದಲ್ಲಿ ಮೀನು ಹಿಡಿದು ಪ್ರತಿಭಟನೆ

Share

ಕುಮಟಾ : ಕುಮಟಾದಿಂದ ಶಿರಸಿಯ ರಾಜ್ಯ ಹೆದ್ದಾರಿ ಅವ್ಯವಸ್ಥೆ ಖಂಡಿಸಿ ನಾಗರಿಕರು ಮೀನು ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕುಮಟಾದ ತಾಲೂಕಿನ ಅಳಕೋಡದಲ್ಲಿ ರಾಜ್ಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆಗಿಳಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ರಸ್ತೆಯ ಗುಂಡಿಗಳಲ್ಲಿ ಮೀನು ಬಿಟ್ಟು ಹಿಡಿಯುವ ಮೂಲಕ ಗಮನ ಸೆಳೆದರು.ಕರವೇ ಬಣದ ಜಿಲ್ಲಾಧ್ಯಕ್ಷ ರಾಜು ಮಾಸ್ತಿಹಳ್ಳ ನೇತೃತ್ವದಲ್ಲಿ ಗುಂಡಿ ಇರುವ ಕಡೆ ಬಾಳೆಗಿಡ ನೆಟ್ಟಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿದರು.ರಸ್ತೆಗಳಲ್ಲಿ ಸಾಕಷ್ಟು ಗುಂಡಿಗಳಿದ್ದು, ವಾಹನ ಸವಾರರಿಗೆ ದಿನಾಲೂ ತೊಂದರೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಹೋರಾಟ ಮುಂದುವರಿಸಿದ್ದಾಗಿ ಎಚ್ಚರಿಸಿದರು.ಬಳಿಕ ಸ್ಥಳಕ್ಕೆ ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮೂರು ದಿನದೊಳಗೆ ರಸ್ತೆ ದುರಸ್ತಿ ಕೈಗೊಳ್ಳುವಂತೆ ಆಗ್ರಹಿಸಿದರು.ತಾತ್ಕಾಲಿಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸುವ ಭರವಸೆ ನೀಡಿದರು.


Share