ಪ್ಯಾರಿಸ್ : ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ , ನಮ್ಮ ಹಾಸನ ಜಿಲ್ಲೆಯ ದುದ್ದ ಮೂಲದ , ಸುಹಾಸ್ ಲಾಲಿನಕೆರೆ ಯತಿರಾಜದ ಪುರುಷರ ಸಿಂಗಲ್ಸ್ ಎಸ್‌ಎಲ್ 4 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ.,
ಸುಹಾಸ್‌ಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಸತತ ಎರಡನೇ ಪದಕವಾಗಿದೆ. ಈ ಹಿಂದೆ 2020ರ ಪ್ಯಾರಾಲಿಂಪಿಕ್ಸ್‌ನಲ್ಲೂ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.,
ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ನ ಲ್ಯೂಕಾಸ್ ಮಜೂರ್ ವಿರುದ್ಧ 0-2 (9-21, 13-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಇದರೊಂದಿಗೆ ವಿಶ್ವ ನಂ.1 ಶ್ರೇಯಾಂಕದ ಸುಹಾಸ್ ಯತಿರಾಜ್ ಸತತ ಎರಡನೇ ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.,
ಕಳೆದ ಬಾರಿ ಅಂದರೆ 2020 ರ ಟೋಕಿಯೋ ಒಲಿಂಪಿಕ್ಸ್ನಲ್ಲೂ ಸುಹಾಸ್ ಬೆಳ್ಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೂ ಸದ್ಯ ಇವರು IAS ಸದ್ಯ ಯು.ಪಿ. ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿ ಪರ್ವಿಜ್ ಅಹಮದ್ ಹಾಸನ