ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥೀ ಹೆಚ್ ಡಿ ಕುಮಾರಸ್ವಾಮಿ ಅವರು 1 ಲಕ್ಷ ಮತಗಳಿಂದ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಕಳೆದ ಬಾರಿ ಸುಮಲತಾ ಅಂಬರೀಶ್ ವಿರುದ್ಧ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋಲುಂಡಿದ್ದರು. ಈ ಬಾರಿಯಾದರೂ ಪುತ್ರನಿಗೆ ಟಿಕೆಟ್ ಕೊಡಿಸಿ ಗೆಲ್ಲಿಸೋಣ ಅಂದುಕೊಂಡಿದ್ದ ಹೆಚ್ಡಿಕೆ ಪಾಲಿಗೇ ಮಂಡ್ಯ ಕ್ಷೇತ್ರದ ಟಿಕೆಟ್ ಒಲಿಯಿತು. ಬಿಜೆಪಿ ಹೈಕಮಾಂಡ್ ನಡೆಸಿ ಹಲವು ಕಸರತ್ತುಗಳ ಬಳಿಕ ಸುಮಲತಾ ಅಂಬರೀಶ್ ಅವರು ಕೊನೆಗೂ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪಿದ್ದರು. ಇದರಿಂದ ಹೆಚ್ಡಿಕೆ ಹಾದಿ ಸುಗಮವಾಯಿತು.
ಕುಮಾರಸ್ವಾಮಿಯವರ ಪ್ರತಿಸ್ಪರ್ಧಿಯಾಗಿ ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ವೆಂಕಟರಮಣೇಗೌಡ ಪೈಪೋಟಿ ನೀಡಿದ್ದು ಸೋಲು ಗೆಲುವಿನ ಲೆಕ್ಕಾಚಾರ ಇನ್ನಷ್ಟೇ ತಿಳಿಯಲಿದೆ.
ಪ್ರಸ್ತುತ ಸ್ಟಾರ್ ಚಂದ್ರು ಹಿನ್ನಡೆಯಲ್ಲಿದ್ದಾರೆ. ಈ ಹಿಂದೆಯೂ 2013 ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆ ಆಗಿ ಒಂದು ಬಾರಿ ಸಂಸತ್ ಭವನದ ಮೆಟ್ಟಿಲೇರಿದ್ದ ಕುಮಾರಸ್ವಾಮಿ ಈಗ ಮತ್ತೆ ಮಂಡ್ಯದಿಂದ ಸ್ಪರ್ಧಿಸಿದ್ದು, ಸಕ್ಕರೆ ನಾಡಿನ ಜನರ ತೀರ್ಪು ಯಾರ ಪರ ಅನ್ನೋದು ಇನ್ನಷ್ಟೇ ಗೊತ್ತಾಗಲಿದೆ.ಪ್ರಸ್ತುತದ ಟ್ರೆಂಡ್ ಪ್ರಕಾರ ಕುಮಾರಸ್ವಾಮಿಯವರು 1,13,860 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕುಮಾರಸ್ವಾಮಿಯವರಿಗೆ ಒಟ್ಟು 2,73,719 ಮತಗಳು ಬಂಂದಿದ್ದು, ಸ್ಟಾರ್ ಚಂದ್ರು ಅವರಿಗೆ 1,59,859 ಮತಗಳು ಬಂದಿವೆ,
ಇನ್ನು ಹಾವೇರಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿಯವರು 6,5714 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು 29,880 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಮತ್ತು ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ವಿರುದ್ಧ 81,246 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಹಾಸನದಲ್ಲಿ ಮತ ಎಣಿಕೆ ಪ್ರಗತಿಯಲ್ಲಿದ್ದು, ಜೆಡಿಎಸ್ ಪ್ರಜ್ವಲ್ ರೇವಣ್ಣ ವರು 5,499 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆಮೈಸೂರಿನಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜನಗರ ಒಡೆಯರ್ ಅವರು 2,72,832 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ಣ ವಿರುದ್ಧ 57,294 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಗುಲ್ಬರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಿ ಜಾಧವ್ 1,59,911 ಮತಗಳನ್ನು ಗಳಿಸಿ 1,54,006 ಮತಗಳನ್ನು ಪಡೆದಿರುವ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ವಿರುದ್ಧ 73,996 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಇದರೊಂದಿಗೆ ಪ್ರಸ್ತುತ ಟ್ರೆಂಡ್ ಪ್ರಕಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 8 ಮತ್ತು ಜೆಡಿಎಸ್ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.