Election Results 2024 Live Updates: ಬೆಂಗಳೂರಿನ 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ!

Election Results 2024 Live Updates: ಬೆಂಗಳೂರಿನ 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ!

Share

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬೆಂಗಳೂರಿನ 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬೆಂಗಳೂರು ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿವೆ. 2019ರಲ್ಲಿಯೂ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿತ್ತು. ಈ ಬಾರಿ 2 ಕ್ಷೇತ್ರಗಳು ಬಿಜೆಪಿ ಪಾಲಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು 1,03,519 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು 2,10,262 ಮತಗಳ ಅಂತರದಿದಂ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ.ಮೋಹನ್ ವಿರುದ್ಧ ಮನ್ಸೂನ್ ಅಲಿ ಖಾನ್ ಅವರು 53,382 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿಎನ್.ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಿಕೆ.ಸುರೇಶ್ ವಿರುದ್ಧ 1,25,760 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.


Share