ಕುಮಟಾ: ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಅಂತಿಮ ಹಂತಕ್ಕೆ ಬಂದಿದ್ದು, ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಸೋಲಾಗಿದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಅಂತಿಮ ಹಂತಕ್ಕೆ ಬಂದಿದ್ದು ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ 576,127 ಮತ ಪಡೆದಿದ್ದರೆ, ಕಾಂಗ್ರೆಸಿನ ಅಂಜಲಿ ನಿಂಬಾಳ್ಕರ್ 316,345 ಮತ ಪಡೆದಿದ್ದಾರೆ. ಒಟ್ಟಾರೆ ಕಾಗೇರಿ 259,782 ಮತದ ಭಾರಿ ಅಂತರದ ಮುನ್ನಡೆ ಪಡೆದಿದ್ದಾರೆ