ಬ್ಲಾಕ್ ಕಾಂಗ್ರೇಸ್ ಕಾರ್ಕಳ ಮತ್ತು ಹೆಬ್ರಿ ಹಾಗೂ ಉದಯ್ ಕುಮಾರ್ ಶೆಟ್ಟಿ ಅಭಿಮಾನಿ ಬಳಗ ಆಶ್ರಯದಲ್ಲಿ ಕಾಂಗ್ರೇಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ, ಉಚಿತ ಹೃದಯ ರೋಗ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ, ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಕಿ ತೇರ್ಗಡೆಯಾದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಶನಿವಾರ ಜೂನ್ 8 ರಂದು ಬೆಳಿಗ್ಗೆ 9 ರಿಂದ ಮಂಜುನಾಥ್ ಪೈ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೇಸ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ