ಶಿರಸಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಶಿರಸಿಯ ಶ್ರೀ ಮಾರಿಕಾಂಬಾ ಪ್ರೌಢ ಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿನಿ ಜಿ.ಎನ್. ಸಾದ್ವಿ ಆಂಗ್ಲ ಭಾಷಾ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.ಬೆಂಗಳೂರಿನಲ್ಲಿ ಜೂನ್ ೮ರಂದು ಬಹುಮಾನ ಪ್ರದಾನ ಸಮಾರಂಭ ನಡೆಯಲಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಈಕೆ ಶಿಕ್ಷಕ ದಂಪತಿಗಳಾದ ನಾಗರಾಜ ಎಂ ಮಡಿವಾಳ ಹಾಗೂ ಸೀಮಾ ಮಡಿವಾಳ ಅವರ ಪುತ್ರಿಯಾಗಿದ್ದಾಳೆ