ಕಲಬುರಗಿ:- ಬಾಲ ಕಾರ್ಮಿಕ ಪದ್ಧತಿಯುಮಕ್ಕಳ ಬೆಳವಣಿಗೆಗೆ ಮಾರಕವಾಗಿದ್ದು, ಅದರ ನಿರ್ಮೂಲನೆಗೆ ಸಂವಿಧಾನ, ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ಜಾರಿಗೊಳಿಸಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ನಿರ್ಮೂಲನೆ ಮಾಡಲು ಅಧಿಕಾರಿಗಳ ಇಚ್ಛಾಶಕ್ತಿ ಹಾಗೂ ಪಾಲಕ-ಪೋಷಕ, ಉದ್ಯೋಗದಾತರ ಸೇರಿದಂತೆಎಲ್ಲರಸಹಕಾರದಿಂದ ಮಾತ್ರ ಸಾಧ್ಯವಿದೆಎಂದುನ್ಯಾಯವಾದಿ ಡಾ.ಸುನೀಲಕುಮಾರಎಚ್.ವಂಟಿ ಹೇಳಿದರು.
ನಗರದ’ಕೊಹಿನೂರಕಂಪ್ಯೂಟರತರಬೇತಿಕೇಂದ್ರ’ದಲ್ಲಿ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದಜರುಗಿದ ‘ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ಯನ್ನು ಉದ್ಘಾಟಿಸಿ ಅವರುಮಾತನಾಡುತ್ತಿದ್ದರು.ಬಳಗದ ಅಧ್ಯಕ್ಷ, ಅರ್ಥಶಾಸ್ತ್ರಉಪನ್ಯಾಸಕಎಚ್.ಬಿ.ಪಾಟೀಲ ಮಾತನಾಡಿ, ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯ ಪೂರ್ವದಿಂದಲೇರಚಿಸಲಾಗಿದೆ. ನಂತರ ಅನೇಕ ಕಾಯ್ದೆಗಳನ್ನು ಜಾರಿಗೊಳಿಸಿ ಬಾಲ ಕಾರ್ಮಿಕತೆಯ ನಿರ್ಮೂಲನೆಗೆ ಶ್ರಮಿಸಲಾಗುತ್ತಿದೆ. ಶಿಕ್ಷಣ ದೊರೆತರೆ ಹಾಗೂ ಬಡತನ ನಿರ್ಮೂಲನೆಯಾದರೆಬಾಲ ಕಾರ್ಮಿಕತೆನಿರ್ಮೂಲನೆಯಾಗುತ್ತ ಎಂಬ ಸಂಗತಿಯಿಂದಸರ್ಕಾರಗಳು ಅನೇಕ ಸೌಕರ್ಯಗಳನ್ನು ನೀಡುತ್ತಿವೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಪಾಲಕ-ಪೋಷಕ ವರ್ಗದವರುತಮ್ಮ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೆ, ಶಿಕ್ಷಣ ನೀಡಿ ಸದೃಢ ಮಾನವ ಸಂಪನ್ಮೂಲವನ್ನಾಗಿಸಬೇಕುಎಂದರು.ಬಾಲ ಕಾರ್ಮಿಕತೆಯಿಂದಾಗುವ ದುಷ್ಪರಿಣಾಮಗಳನ್ನು ಬಾಲ ಕಾರ್ಮಿಕರು, ಪಾಲಕ-ಪೋಷಕ, ಸಮುದಾಯಕ್ಕೆ ಮನವರಿಕೆ ಮಾಡಿಕೊಟ್ಟು, ಅವರಲ್ಲಿ ಮಾನಸಿಕ ಧೈರ್ಯವನ್ನು ತುಂಬಬೇಕು. ಅಂತಹ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಯೋಜನೆ,ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿ ನಾಶಪಡಿಸಬಹುದಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿಸಂಸ್ಥೆಯಅಧ್ಯಕ್ಷಡಾ.ಸತೀಶ್ ಟಿ.ಸಣಮನಿ,ಉಪನ್ಯಾಸಕರಾದ ಅಶ್ವಿನಿ,ಅರ್ಚನಾ,ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪಗಣಮುಖಿ, ನಿವೃತ್ತಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ, ಸಮಾಜ ಸೇವಕ ಅಮೃತ ಸಿ.ಪಾಟೀಲ,ಗುರುಶಾಂತಪ್ಪ, ಮಲ್ಲಿಕಾರ್ಜುನ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ –ಡಾ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್