ಕುಮಟಾ: ಹೊನ್ನಾವರ ಕಡೆಯಿಂದ ಕಾರವಾರಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬರ್ಗಿಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾದ ಘಟನೆ ನಡೆದಿದೆ.ಪಲ್ಟಿಯಾದ ಕಾರು ಕಾರವಾರ ಕೆಎಚ್ ಬಿ ಕಾಲೋನಿಯ ಸಚಿನ್ ಶೇಟ್ ಎಂಬುವವರಿಗೆ ಸೇರಿದೆ. ಧರ್ಮಸ್ಥಳದಿಂದ ಬಂದು ಕರ್ಕಿಯ ಸಂಬಂಧಿಕರ ಮನೆಯಲ್ಲಿ ಉಳಿದು ಕೊಂಡು ಇಂದು ಕಾರವಾರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ.
ಕಾರಿನಲ್ಲಿ ಎಂಟು ತಿಂಗಳ ಗರ್ಭಿಣಿ ಸಹ ಪ್ರಯಾಣ ಮಾಡುತ್ತಿದ್ದು, ಕಾರಿನಲ್ಲಿದ್ದ ನಾಲ್ವರು ಕೂಡ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.