2024 -25 ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ ಸಹಭಾಗಿತ್ವದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ತಾಲೂಕ ಮಟ್ಟದ ಸಹಪಠ್ಯ ಚಟುವಟಿಕೆಯ ಪ್ರಾಥಮಿಕ ಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀಮತಿ ಶ್ವೇತಾ ಕಮತಗಿ ಸ. ಶಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೇಲೂರು ಪ್ರಥಮ ಸ್ಥಾನ ಪಡೆದಿದ್ದಾರೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಕು. ಸೀಮಾ ಕಾಂಬಳೆ ಸ. ಶಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಂಜಣಗಿ ಯವರು ದ್ವಿತೀಯ ಸ್ಥಾನ ಪಡೆದಿದ್ದಕ್ಕಾಗಿ ಜೇರಟಗಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗುರುಪಾದ ಮಾವೂರ ಹಾಗೂ ಕ್ಲಸ್ಟರ ಮಟ್ಟದಲ್ಲಿ ಭಾಗವಹಿಸಿ ಈ ಸಂದರ್ಭದಲ್ಲಿ ಎಲ್ಲ ಶಿಕ್ಷಕರು ಮತ್ತು ಶಾಲೆಯ ಮುಖ್ಯ ಗುರುಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಶಾಲೆಯ ಶಿಕ್ಷಕರಾದ ಮಹಾಂತೇಶ್ ಪಾಟೀಲ್ ಯಾಥನೂರ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ