ಓಂ ಶ್ರೀ ಮಂಜುನಾಥಯ ನಮಃ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ರವರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಮಾಹಿತಿ ಕಾರ್ಯಕ್ರಮವನ್ನು ರಾಮನಾಥಪುರ ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರು ಶಿವರಾಮೇಗೌಡ್ರು ವಹಿಸಿದ್ದರು ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಪರಿಸರ ಪರಿಸರ ಮಾಲಿನ್ಯದ ಬಗ್ಗೆ ಹಾಗೂ ಪರಿಸರ ಉಳಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಿದರು, ಈ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು ಹಿರಿಯ ಶಿಕ್ಷಕರು ವಲಯ ಮೇಲ್ವಿಚಾರಕರು ಹೇಮಲತಾ, ಕೃಷಿ ಮೇಲ್ವಿಚಾರಕರು ಸುನಿಲ್ ಕುಮಾರ್ M,ವಲಯದ ಸೇವಾ ಪ್ರತಿನಿಧಿಗಳು ರೂಪ ಮಂಜು ಭಾಗವಹಿಸಿದ್ದರು,ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲರೂ ಕಾರ್ಯಕ್ರಮದ ಬಗ್ಗೆ ಒಂದೆರಡು ಮಾತುಗಳನ್ನಾಡುತ್ತಾ ಮಕ್ಕಳಿಗೆ ಪರಿಸರ ಬಗ್ಗೆ ಪರಿಸರ ಸಂರಕ್ಷಣೆ ಬಗ್ಗೆ ಹಾಗೂ ಯೋಜನೆಯ ಹಲವು ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಕೊನೆಯಲ್ಲಿ ಗಿಡವನ್ನು ನೆಡುವುದರ ಮೂಲಕ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಶಾಲೆಯ ವಿದ್ಯಾರ್ಥಿಗಳು ಎಲ್ಲರೂ ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಪೂರ್ಣಗೊಂಡಿತು.