ಜೇವರ್ಗಿ ಪಟ್ಟಣದಲ್ಲಿ ಕೆಸರಿನ ಗದ್ದೆಯಂತಾದ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ ಮೊಹಮ್ಮದ್ ಶೋಯಬ್ ಗಿರಣಿ ಆಕ್ರೋಶ.

ಜೇವರ್ಗಿ ಪಟ್ಟಣದಲ್ಲಿ ಕೆಸರಿನ ಗದ್ದೆಯಂತಾದ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ ಮೊಹಮ್ಮದ್ ಶೋಯಬ್ ಗಿರಣಿ ಆಕ್ರೋಶ.

Share

ಜೇವರ್ಗಿ ತಾಲೂಕಿನ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯೂ ಸಂಪೂರ್ಣ ಮಳೆಯ ನೀರಿನಿಂದ ಕೆರೆಯಂತಾಗಿ ಇಲ್ಲಿನ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ತುಂಬಾ ತೊಂದರೆ ಆಗುತ್ತಿದೆ ಅದೇ ರೀತಿಯಾಗಿ ಶಾಲೆಯ ಮೇಲ್ಚಾವಣಿ ಸಂಪೂರ್ಣ ಬೀಳುವ ಹಂತದಲ್ಲಿದೆ ಇದರಿಂದ ಶಾಲೆಯ ಶಿಕ್ಷಕರು ಮತ್ತು ಮಕ್ಕಳು ಆತಂಕದಲ್ಲಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಜೇವರ್ಗಿ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಲ್ಬುರ್ಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹಮ್ಮದ್ ಶೋಯಬ್ ಗಿರಣಿ ಅವರು ಪತ್ರಿಕಾ ಪ್ರಕಟಣೆಯನ್ನು ತಿಳಿಸಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಜೇವರ್ಗಿ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಇತ್ತ ಕಡೆ ಸ್ವಲ್ಪ ಗಮನ ಹರಿಸುವುದು ಸೂಕ್ತವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ವರದಿ ಜಟ್ಟಪ್ಪ ಎಸ್ ಪೂಜಾರಿ


Share