‘ನೀವು ಜನರನ್ನು ಕೊಲ್ಲಲು ಹೋಗಬೇಡಿ’: ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ, ಪೊಲೀಸರ ಕೆಲಸಕ್ಕೆ ಮೆಚ್ಚುಗೆ

‘ನೀವು ಜನರನ್ನು ಕೊಲ್ಲಲು ಹೋಗಬೇಡಿ’: ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ, ಪೊಲೀಸರ ಕೆಲಸಕ್ಕೆ ಮೆಚ್ಚುಗೆ

Share

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸಿರುವುದು ಕನ್ನಡ ಚಿತ್ರರಂಗದ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಚರಂಡಿಯಲ್ಲಿ 33 ವರ್ಷದ ರೇಣುಕಾ ಸ್ವಾಮಿ ಎಂಬುವವರ ಶವ ಪತ್ತೆಯಾದ ಬಳಿಕ ದರ್ಶನ್ ಸೇರಿದಂತೆ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿರುವ ರಮ್ಯಾ, ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು’ ಎಂದಿದ್ದಾರೆ.ಅದೇ ಪೋಸ್ಟ್‌ನಲ್ಲಿ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ‘ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ’ ಎಂದಿದ್ದಾರೆ.ಲೈಂಗಿಕ ಕಿರುಕುಳದ ಆರೋಪದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿರುವ ಬಗ್ಗೆ ನಟಿ ಎಕ್ಸ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.


Share