ಶಿವಮೊಗ್ಗದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಸಮಿತಿ (District Development Coordination and Monitoring Committee – DISHA) ಸಭೆಯನ್ನು ನಡೆಸಿಕೊಡಲಾಯಿತು.
18ನೇ ಲೋಕಸಭಾ ಚುನಾವಣೆಯ ನಂತರ ನಡೆದ ಮೊಟ್ಟ ಮೊದಲ DISHA ಸಮಿತಿ ಸಭೆಯಾಗಿದೆ. ಈ ಸಾಲಿನಲ್ಲಿ DISHA ಸಮಿತಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಇದೇ ವೇಳೆಯಲ್ಲಿ ಸಭೆಯಲ್ಲಿ ಪರಿಚಯಿಸಲಾಯಿತು.
ನಂತರ ರೈಲ್ವೇ ಇಲಾಖೆ, ರಾಷ್ಟ್ರೀಯ ಹೆದ್ದಾರಿ, ಕೃಷಿ ಸಿಂಚಾಯಿ ಯೋಜನೆ, ಸ್ವಚ್ಛ ಭಾರತ ಯೋಜನೆ, ನರೇಗಾ ಯೋಜನೆ, ಗ್ರಾಮ ಸಡಕ್ ಯೋಜನೆ, ಸಾಮಾಜಿಕ ಭದ್ರತಾ ಯೋಜನೆ, ಆವಾಸ್ ಯೋಜನೆ, ಡಿಜಿಟಲ್ ಇಂಡಿಯಾ ಯೋಜನೆ, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಸೇರಿದಂತೆ ಇನ್ನು ಅನೇಕ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ತ ಹೆಗಡೆ ಅವರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಹೇಮಂತ್ ಕುಮಾರ್ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ಅವರು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.