ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ ಅವರಿಂದ ಭಟ್ಕಳ ನಗರ ಪೊಲೀಸ್ ಠಾಣೆಯ ಹವಾಲ್ದಾರ್ ದೀಪಕ ಸದಾನಂದ ನಾಯ್ಕರಿಗೆ ಪ್ರಶಂಸನಾ ಪತ್ರ

ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ ಅವರಿಂದ ಭಟ್ಕಳ ನಗರ ಪೊಲೀಸ್ ಠಾಣೆಯ ಹವಾಲ್ದಾರ್ ದೀಪಕ ಸದಾನಂದ ನಾಯ್ಕರಿಗೆ ಪ್ರಶಂಸನಾ ಪತ್ರ

Share

ಭಟ್ಕಳ: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಮುಂಬಡ್ತಿ ನಂತರದ ತರಬೇತಿ ಪಡೆದ ಭಟ್ಕಳ ಶಹರ ಠಾಣೆಯ ಹವಾಲ್ದಾರ್ ದೀಪಕ ಸದಾನಂದ ನಾಯ್ಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ. ದೀಪಕ ನಾಯ್ಕರ ಕರ್ತವ್ಯ ಪ್ರಜ್ಞೆ, ಬುದ್ದಿವಂತಿಕೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕಕುಮಾರ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.ಮೇ ತಿಂಗಳಿನಲ್ಲಿ ಆರಂಭವಾಗಿ ಜೂನ್ ಮೊದಲ ವಾರದಲ್ಲಿ ಮುಕ್ತಾಯವಾದ ತರಬೇತಿ ಘಟಕದಲ್ಲಿ ಕರ್ನಾಟಕದಿಂದ ನೂರಾರು ಸಂಖ್ಯೆಯ ಪೊಲೀಸರು ಭಾಗಿಯಾಗಿದ್ದರು. ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ ಅವರು ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೀಪಕ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದರು. ಅತ್ಯುತ್ತಮವಾಗಿ ಉತ್ತರ ನೀಡಿದ ಪರಿ ಹಾಗೂ ಅವರ ಬುದ್ದಿವಂತಿಕೆಗೆ ಮೆಚ್ಚಿ ಪ್ರಶಂಸನಾಪತ್ರ ನೀಡಿ ಗೌರವಿಸಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದ್ದಾರೆ.


Share