ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ

ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ

Share

ಜೋಡು ರಸ್ತೆ ರಾಜಪುರ ಸಾರಸತ್ವ ಬ್ಯಾಂಕ್ ನ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ ಶನಿವಾರ ನಡೆಯಿತು.ರಾಜಪುರ ಸರಸ್ವತ ಬ್ಯಾಂಕಿನ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಆಡಳಿತ ವ್ಯವಸ್ಥೆಯಲ್ಲಿ ಕಾರ್ಯಾಂಗ ಶಾಸಕಾಂಗ ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಮಾಜದಲ್ಲಿ ಆಗುವ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಹಾಗೂ ಸರಕಾರದ ಲೋಪ ದೋಷಗಳನ್ನು ಸರಿಪಡಿಸುವಲ್ಲಿ ಪತ್ರಿಕಾ ರಂಗಾ ಬಹಳ ಪ್ರಾಮುಖ್ಯವಾಗಿದೆ.ಶಿಕ್ಷಣ ಮತ್ತು ಆರೋಗ್ಯ ಸಮಾಜದ ಎರಡು ಕಣ್ಣುಗಳು .ಆರೋಗ್ಯ ಮತ್ತು ಶಿಕ್ಷಣ ಸರಿಯಾಗಿದ್ದರೆ ಅಲ್ಲಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿರುತ್ತದೆ.ಪ್ರತಿ ವರ್ಷ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳುತ್ತಾ ಬಂದಿದ್ದು ಬ್ಯಾಂಕ್ ನಿಂದ ಬಂದ ಲಾಭಾಂಶದಲ್ಲಿ ಸ್ವಲ್ಪ ಪ್ರಮಾಣ ಸಮಾಜ ಸೇವೆಗೆ ವಿನಿಯೋಗ ಮಾಡುತ್ತಿದ್ದೇವೆ ಎಂದರು.ಕಾರ್ಕಳ ಕಾರ್ಯನಿರತ ಪತ್ರಕರ್ತದ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಮಾತನಾಡಿ ರಾಜಪುರ ಸಾರಸ್ವತ ಬ್ಯಾಂಕ್ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯ. 29 ವರ್ಷಗಳ ಹಿಂದೆ ಕಡಿಮೆ ಜನಸಂಖ್ಯೆ ಇರುವ ಸದಸ್ಯರಿಂದ ಸ್ಥಾಪನೆಗೊಂಡ ರಾಜಪುರ ಸಾರಸತ್ವ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಸಮಾಜ ಸೇವೆಯ ಮುಖಾಂತರ ಪ್ರತಿಷ್ಠಿತ ಸಂಸ್ಥೆಯಾಗಿ ಮೂಡಿಬಂದಿದೆ. ಶಿಕ್ಷಣ ಹಾಗೂ ಆರೋಗ್ಯಕ್ಕೆ ತಮ್ಮದೇ ಆದಂತ ಕೊಡುಗೆಯನ್ನು ನೀಡಿದ್ದು ಕೊರೋನಾ ಸಂದರ್ಭದಲ್ಲಿ ಕೂಡ ಬ್ಯಾಂಕ್ ಉತ್ತಮ ಸಮಾಜಮುಖಿ ಕೆಲಸ ಮಾಡಿದೆ ಎಂದರು.ಸಂವಾದ ಕಾರ್ಯಕ್ರಮದಲ್ಲಿ ರಾಜಪುರ ಸಾರಸ್ವತ ಬ್ಯಾಂಕ್ ನ ಉಪಾಧ್ಯಕ್ಷ ನೀರೆ ರವೀಂದ್ರ ನಾಯಕ್, ಬ್ಯಾಂಕ್ ನ ಕಾರ್ಯ ನಿರ್ವಹಣಾಧಿಕಾರಿ ಸುರೇಂದ್ರ ನಾಯಕ್, ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಬ್ಯಾಂಕಿನ ನಿರ್ದೇಶಕರು ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರು ಹಾಗೂ ಪತ್ರಕರ್ತರ ಸಂಘದ ಸದಸ್ಯರಿಗೆ ರೈನ್ ಕೋಟ್ ವಿತರಿಸಲಾಯಿತು.


Share