ಜೇವರ್ಗಿ ತಾಲೂಕಿನ( ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ.ಅಜಯ್ ಸಿಂಗ್ ತವರಾದ ನೆಲ್ಲೋಗಿ ವ್ಯಾಪ್ತಿಯಲ್ಲಿ ಹಗಲು ಹೊತ್ತಿನಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದ್ದರು ಕೂಡ ಪೊಲೀಸ್ ಇಲಾಖೆ ಮೌನ ವಹಿಸಿರುವುದು ಕುತೂಹಲಕಾರಿಯಾಗಿದೆ ತಾಲೂಕ ದಂಡಾಧಿಕಾರಿಗಳು ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕಾಗಿತ್ತು ಇನ್ನು ಮುಂದಾದರು ಅಕ್ರಮ ಮರಳು ಸಾಗಣಿಕೆಗೆ ಕಡಿವಾಣ ಹಾಕಬೇಕು ಹಾಗೂ ಜೇವರ್ಗಿ ತಾಲೂಕಿನ ಶಾಸಕರಾದ ಡಾ ಅಜಯ್ ಸಿಂಗ್ ಅವರು ಅಕ್ರಮ ಮರಳು ಸಾಗಾಣಿಕೆ ಕಡಿವಾಣಕ್ಕೆ ಅಧಿಕಾರಿಗಳಿಗೆ ಖಡಕ್ಕಾಗಿ ವಾರ್ನಿಂಗ್ ಮಾಡಬೇಕು ಎಂದು ಶ್ರೀರಾಮ ಸೇನಾ ಸಂಘಟನೆಯ ತಾಲೂಕ ಅಧ್ಯಕ್ಷರಾದ ಮಲಕಣ್ಣ ಹಿರೇ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ ಒಂದು ವೇಳೆ ಇದಕ್ಕೆ ಸಂಬಂಧಪಟ್ಟ ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಲಕ್ಷ ವಹಿಸಿದರೆ ತಾಲೂಕ ದಂಡಾಧಿಕಾರಿಗಳ ಕಾರ್ಯಲಯದ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ
ವರದಿ ಜಟ್ಟಪ್ಪ ಎಸ್ ಪೂಜಾರಿ