ತೈಲ ಬೆಲೆ ಹೆಚ್ಚಳ ವಿರೋಧಿಸಿ ಎತ್ತಿನ ಬಂಡಿಯೊಂದಿಗೆ ಬಿಜೆಪಿ ಪ್ರತಿಭಟನೆ..!

ತೈಲ ಬೆಲೆ ಹೆಚ್ಚಳ ವಿರೋಧಿಸಿ ಎತ್ತಿನ ಬಂಡಿಯೊಂದಿಗೆ ಬಿಜೆಪಿ ಪ್ರತಿಭಟನೆ..!

Share

ಕಲಬುರಗಿ:– ತೈಲ ಬೆಲೆ ಹೆಚ್ಚಳವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಎತ್ತಿನ ಬಂಡಿಯೊಂದಿಗೆ ಬೃಹತ್ ಪ್ರತಿಭಟನೆ ಮಾಡಿದರು. ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಲೂಟಿ ಸರ್ಕಾರ ಎಂಬ ಘೋಷಣೆಗಳನ್ನು ಹಾಕಿದರು.ಈ ಸಂದರ್ಭದಲ್ಲಿ ಶಾಸಕ ಬಸವರಾಜ್ ಮತ್ತಿಮೂಡ್ ಅವರು ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಕೊಲೆ, ಸುಲಿಗೆ ಹೆಚ್ಚುತ್ತಿವೆ. ಎಲ್ಲ ರೀತಿಯಿಂದಲೂ ಕಾಂಗ್ರೆಸ್ ಸರ್ಕಾರ ಸಮಸ್ಯೆ ಮಾಡುತ್ತಿದೆ. ಗ್ಯಾರಂಟಿಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಮೇಲೆ ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು 3ರೂ.ಗಳು, 3-50ರೂ.ಗಳಿಗೆ ಹೆಚ್ಚಿಗೆ ಮಾಡಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದಲ್ಲಿ ಅನೇಕ ಹಗರಣಗಳಿವೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಹೀಗಾಗಿ ತೈಲ ಬೆಲೆಯನ್ನು ನಾವು ವಿರೋಧಿಸುತ್ತೇವೆ. ಹೆಚ್ಚಳ ದರ ಹಿಂಪಡೆಯುವವರೆಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಬಸವರಾಜ್ ಮತ್ತಿಮೂಡ್, ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕರಾದ ಅಮರನಾಥ್ ಪಾಟೀಲ್, ದತ್ತಾತ್ರೇಯ್ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೆಲ್ಕೂರ, ಬಾಬುರಾವ್ ಚವ್ಹಾಣ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ್ ಗುತ್ತೆದಾರ್, ಶಿವಕಾಂತ್ ಮಹಾಜನ್, ಶರಣಪ್ಪ ತಳವಾರ್, ಅವ್ವಣ್ಣ ಮ್ಯಾಕೇರಿ, ದಿಲೀಪ್ ಪಾಟೀಲ್, ಶಿವಯೋಗಿ ನಾಗನಹಳ್ಳಿ, ಉಮೇಶ್ ಪಾಟೀಲ್, ಬಸವರಾಜ್ ಮಾಲಿಪಾಟೀಲ್, ಸುರೇಶ್ ಸಜ್ಜನ್, ಶೋಭಾ ಪಾಟೀಲ್, ವಿಜಯಲಕ್ಷ್ಮೀ ಗೊಬ್ಬೂರಕರ್, ರಾಜು ಪಾಟೀಲ್ ನಾಗನಹಳ್ಳಿ, ಮಹೇಶ್ ರೆಡ್ಡಿ,ಅಣವೀರ್ ಪಾಟೀಲ್, ಮಹಾದೇವ್ ಬೇಳಮಗಿ, ಶಶಿಧರ್ ಸೂಗುರ್, ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ ಮುಂತಾದವರು ಪಾಲ್ಗೊಂಡಿದ್ದರು. ‌ ‌

ವರದಿ- ಡಾ.ಎಮ್.ಬಿ ಹಡಪದ ಸುಗೂರ ಎನ್


Share