ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ನೂತನ ಕಛೇರಿಯನ್ನ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ನಗರ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಜಿ.ಕೃಷ್ಣಪ್ಪರವರು ಉದ್ಘಾಟನೆ ಮಾಡಿದರು….@DKSHIVKUMAR

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ನೂತನ ಕಛೇರಿಯನ್ನ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ನಗರ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಜಿ.ಕೃಷ್ಣಪ್ಪರವರು ಉದ್ಘಾಟನೆ ಮಾಡಿದರು….@DKSHIVKUMAR

Share

ಬಿಬಿಎಂಪಿ ಕೇಂದ್ರ ಕಛೇರಿ: ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಛೇರಿಯ ಲೋಕರ್ಪಣೆ ಸಮಾರಂಭ.ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿರವರು, ವಿಧಾನಪರಿಷತ್ ವಿರೋಧ ಪಕ್ಷದ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು, ವಿಧಾನಪರಿಷತ್ ಸದಸ್ಯರಾದ ಸಲೀಮ್ ಅಹಮದ್ಮ, ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಕೃಷ್ಣಪ್ಪರವರು, ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ನೂತನ ಕಛೇರಿಯನ್ನ ಲೋಕರ್ಪಣೆ ಮಾಡಿದರು.ಶಾಸಕರಾದ ಪ್ರಿಯಾಕೃಷ್ಣರವರು, ಮಾಜಿ ಉಪಮಹಾಪೌರರಾದ ಎಲ್.ಶ್ರೀನಿವಾಸ್ ರವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ರವರು ಮಾತನಾಡಿ ಗ್ಯಾರಂಟಿ ಯೋಜನೆಗಳು ದುರ್ಬಲರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ.ಗ್ಯಾರಂಟಿ ಯೋಜನೆಗಳ ಸಮಿತಿಯನ್ನು ರಾಜ್ಯ ಮಟ್ಟದಲ್ಲಿ ಜಾರಿಗೆ ತಂದಿದೆ.ಗ್ಯಾರಂಟಿ ಯೋಜನೆ ಜಿಲ್ಲಾ ಮಟ್ಟದ ಅಧ್ಯಕ್ಷರಿಗೆ 50ಸಾವಿರ ಮತ್ತು ತಾಲೂಕು ಮಟ್ಟದ ಅಧ್ಯಕ್ಷರಿಗೆ 25ಸಾವಿರ ರೂಪಾಯಿ ವೇತನ ನೀಡಲಾಗುತ್ತಿದೆ.ಜಿಲ್ಲೆ , ತಾಲೂಕು ಮತ್ತು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆ ಸಮಿತಿಯ ಕಛೇರಿ ತೆರಯಲಾಗುತ್ತದೆ ಖಾಲಿ ಇರುವ ಗ್ಯಾರಂಟಿ ಯೋಜನೆ ಸಮಿತಿಗೆ ಭರ್ತಿ ಮಾಡಲಾಗುತ್ತದೆ.ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಸಮರ್ಪಕವಾಗಿ ತಲುಪಿದಿಯ ಎಂಬ ಪರಿಶೀಲನೆ ಜವಾಬ್ದಾರಿ ಹೊಂದಿದೆ.ಜಿ.ಕೃಷ್ಣಪ್ಪ ರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ತಂದಿದೆ.ರಾಜ್ಯದ ಪ್ರತಿ ಕುಟುಂಬವು ಗ್ಯಾರಂಟಿ ಯೋಜನೆಯ ಲಾಭ ತಲುಪಿದೆ.ಅನ್ನಭಾಗ್ಯ ಮತ್ತು 200ಯೂನಿಟ್ ವಿದ್ಯುತ್ ಉಚಿತ, ಮನೆಯ ಯಾಜಮಾನಿಗೆ 2000ರೂ ಸಹಾಯಧನ, ಶಕ್ತಿ ಯೋಜನೆ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಯುವ ನಿಧಿ ಯೋಜನೆಗಳು ಬಡವರ ಮತ್ತು ಮಧ್ಯಮ ವರ್ಗದ ಕುಟುಂಬದವರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ.ಬೆಂಗಳೂರುನಗರ ಪ್ರದೇಶದಲ್ಲಿ 28ವಿಧಾನಸಭಾ ಕ್ಷೇತ್ರದಲ್ಲಿ ಅಧ್ಯಕ್ಷರನ್ನ ನೇಮಕ ಮಾಡಲಾಗಿದೆ.ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನ ತಿಳಿಸಲಾಗುತ್ತದೆ.ಕಾಂಗ್ರೆಸ್ ಪಕ್ಷ ಬಡವರ ಪರ ಧ್ವನಿಯಾಗಿ ಅವರ ಜೀವನವನ್ನು ಕೈಹಿಡಿಯವ ಕೆಲಸ ಮಾಡುತ್ತಿದೆ ಎಂದು ಹೇಳಿದರು.ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳು, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


Share