TNIE ವರದಿಗಾರನ ಮೇಲೆ ಹಲ್ಲೆ: ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶ

TNIE ವರದಿಗಾರನ ಮೇಲೆ ಹಲ್ಲೆ: ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶ

Share

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ಆದೇಶಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಹಿನ್ನೆಲೆಯಲ್ಲಿ ಇಪ್ಪತ್ತಮೂರು ವರ್ಷದ ರಕ್ಷಿತ್ ಗೌಡ ಅವರು ಸುದ್ದಿ ಮಾಡಲು ತೆರಳಿದ್ದಾಗ ಜೂನ್ 15 ರಂದು ನೃಪತುಂಗ ರಸ್ತೆಯಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆವರಣದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.

ವಿಚಾರಣೆ ಪ್ರಾರಂಭವಾಗುವ ಹೊತ್ತಿನಲ್ಲಿ ಅಲ್ಲಿಯೇ ನಿಂತಿದ್ದಾಗ ನಾಲ್ವರು ಅಪರಿಚಿತ ಆರೋಪಿಗಳು ಅವರ ಬಳಿಗೆ ಬಂದು ಅವರು ಯಾರೆಂದು ಪ್ರಶ್ನಿಸಲು ಪ್ರಾರಂಭಿಸಿದರು. ಅವರು ಮಾಧ್ಯಮದವರು ಎಂದು ಉತ್ತರಿಸಿದಾಗ, ತಕ್ಷಣವೇ ಅವರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದರು ಮತ್ತು ಸುಮಾರು 50 ಮೀಟರ್ ವರೆಗೆ ಅವರನ್ನು ಎಳೆದೊಯ್ದಿದ್ದಾರೆ. ಅವಾಚ್ಯ ಪದಗಳಿಂದ ಅವರನ್ನು ನಿಂದಿಸಿದ್ದು, ಕೋರ್ಟ್ ಸಂಕೀರ್ಣದಿಂದ ತೆರಳುವಂತೆ ತಾಕೀತು ಮಾಡಿದ್ದಾರೆ. ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಕಾಣಿಸಿಕೊಂಡರೆ ಭೀಕರ ಪರಿಣಾಮ’ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.ರಕ್ಷಿತ್ ನೀಡಿರುವ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದಾರೆ. ಮಂಗಳವಾರ, ವರದಿಗಾರ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಬಳಿಕ ನ್ಯಾಯಾಲಯ, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದರು.


Share