ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಜನರಿಗೆ ಬರೆ!

ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಜನರಿಗೆ ಬರೆ!

Share

ಆಲಮೇಲ. ರಾಜ್ಯ ಸರ್ಕಾರ ಪೆಟ್ರೋಲ-ಡೀಸೆಲ್ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯ ಜನತೆಗೆ ಬೆಲೆ ಏರಿಕೆ ಬರೆ ನೀಡಿದೆ ಎಂದು ಬಿಜೆಪಿ ಮುಖಂಡರಾದ ಸಂತೋಷ ಕ್ಷತ್ರಿ ಹೇಳಿದರು.ಕನಸಿನ ಭಾರತ ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸುವುದಕ್ಕಾಗಿ ತೈಲ ಬೆಲೆಯನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ ಸೋಲಿನ ಹತಾಸೆ.ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯಿಂದ ಆಡಳಿತವನ್ನು ಸಮರ್ಥನಾಗಿ ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಪರಸ್ಥಿತಿ ಸದೃಢವಾಗಿದೆ ಎಂದು ಕೇವಲ ಬಂಡತಿನದಿಂದ ಮಾತನಾಡುವ ಸರಕಾರ ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆಗೊಳಿಸದಂತಹ ಕಠಿಣ ಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ ಎಂದು ಆರೋಪಿಸಿದ್ದರು.


Share