ಮೈಸೂರು: ಕಲುಷಿತ ನೀರು ಸೇವನೆ, ಓರ್ವ ಸಾವು

ಮೈಸೂರು: ಕಲುಷಿತ ನೀರು ಸೇವನೆ, ಓರ್ವ ಸಾವು

Share

ಮೈಸೂರು: ಮೈಸೂರಿನಲ್ಲಿ ಕಲುಶಿತ ನೀರು ಸೇವನೆ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ಮೈಸೂರಿನ ಸಾಲುಂಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ತನಿಖೆ ನಡೆಸಿ, ಆಸ್ಪತ್ರೆಯಲ್ಲಿರುವವರಿಗೆ ಸೂಕ್ತ ಚಿಕಿತ್ಸೆ ಲಭಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಕನಕರಾಜ್(20) ಮೃತ ವ್ಯಕ್ತಿಯಾಗಿದ್ದು, ಅಸ್ವಸ್ಥಗೊಂಡು ವಾಂತಿಯಾದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾರೆ. ಇದೇ ರೋಗಲಕ್ಷಣಗಳನ್ನು ಹೊಂದಿರುವ ಇನ್ನೂ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಸಿದ್ದರಾಮಯ್ಯ ಅವರು ಸಾವಿನ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ಜಲಮಾಲಿನ್ಯಕ್ಕೆ ಕಾರಣವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.


Share