ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ

ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ

Share

ಸಕಲೇಶಪುರ: ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಮಂಗಳವಾರ ಮುಂಜಾನೆ ಎಸ್‌ಯುವಿ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರು ಮಂಗಳೂರು ತಾಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ​​ಗ್ರಾಮದವರು. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ದಾಗ ಶಿರಾಡಿ ಘಾಟ್‌ನ ಕೆಂಪುಹೊಳೆ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.


Share