ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆಗೆ ಶರಣು

Share

ಹುಬ್ಬಳ್ಳಿ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.

ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮಹೇಶ ಹೆಸರೂರು ಹಾಗೂ ಮಹಿಳೆ ಇಬ್ಬರೂ ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ.ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ಮಹಿಳೆ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.

ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಬಗ್ಗೆ ಮಾಹಿತಿ ಮತ್ತು ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ತನಿಖೆ ಕೈಗೊಂಡಿದ್ದಾರೆ.


Share