ಶಾಸಕ ಹರೀಶ್ ಪೂಂಜ ಬಂಧಿಸಿದರೆ ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ: ಬಿ.ವೈ. ವಿಜಯೇಂದ್ರ

ಶಾಸಕ ಹರೀಶ್ ಪೂಂಜ ಬಂಧಿಸಿದರೆ ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ: ಬಿ.ವೈ. ವಿಜಯೇಂದ್ರ

Share

ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಖಂಡನೀಯ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚುನಾವಣಾ ನೀತಿಸಂಹಿತೆ ನೆಪವೊಡ್ಡಿ ಇದರ ಆಧಾರದಲ್ಲಿ ಶಾಸಕರನ್ನು ಬಂಧಿಸಿದರೆ ಪಕ್ಷ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಚುನಾವಣಾ ನೀತಿಸಂಹಿತೆ ನೆಪವೊಡ್ಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಇದರ ಆಧಾರದಲ್ಲಿ ಶಾಸಕರನ್ನು ಬಂಧಿಸಿದರೆ ಪಕ್ಷ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ.
ಈ ಪ್ರಕರಣ ಕುರಿತು ಮಾಹಿತಿ ಪಡೆದಿದ್ದು, ವಿಷಯವನ್ನು ಮರೆಮಾಚುವ ಕೆಲಸವನ್ನು ಅಲ್ಲಿನ ಪೊಲೀಸರು ಮಾಡುತ್ತಿದ್ದಾರೆ. ಅಕ್ರಮ ಕ್ವಾರಿ ಚಟುವಟಿಕೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿಧರ್ ಎಂಬಾತನ ಹೆಸರನ್ನು ಎಫ್ ಐಆರ್ ನಲ್ಲಿ ಸೇರಿಸುವ ಮೂಲಕ ಪೊಲೀಸರು ಪಿತೂರಿ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸುವ ಪ್ರಯತ್ನ ನಡೆದಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಕಾರ್ಯಕರ್ತರನ್ನು ಕುಗ್ಗಿಸಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.


Share