“ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ತಲುಪಿಸಿ – ಜನಸಾಮಾನ್ಯರ ಆರ್ಥಿಕ ಉನ್ನತಿಗೆ ಸರ್ವರೂ ಪರಿಶ್ರಮಿಸಿ”
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್(Lead Bank) ಸಹಯೋಗದಲ್ಲಿ ಶಿವಮೊಗ್ಗದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಸಮಾಲೋಚನಾ ಸಮಿತಿ (District Consultative Committee – DCC) ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (District Level Review Committee – DLRC) ಸಭೆಯು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆಸಿಕೊಡಲಾಯಿತು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ “ಪಿ.ಎಂ. ಸ್ವನಿಧಿ” ಯೋಜನೆ, “ಪಿ.ಎಂ. ವಿಶ್ವಕರ್ಮ” ಯೋಜನೆ, “ಮುದ್ರಾ” ಯೋಜನೆ, “ಪಿ. ಎಂ. ಜೀವನ್ ಜ್ಯೋತಿ ಭೀಮಾ” ಯೋಜನೆ ಸೇರಿದಂತೆ ಇನ್ನೂ ಅನೇಕ ಆರ್ಥಿಕ ಸಬಲೀಕರಣ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು.

ಕೇಂದ್ರ ಸರ್ಕಾರ ಜನಹಿತ ಕಾಯಲು ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಹಲವಾರು ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅಧಿಕಾರಿಗಳು ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಒದಗಿಸಿ ಅರ್ಹ ಫಲಾನುಭವಿಗಳಿಗೆ ಸೂಕ್ತ ಅನುಕೂಲ ಮಾಡಿಕೊಡುವಂತೆ ಸಭೆಯಲ್ಲಿ ಸೂಚನೆ ಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಹೇಮಂತ್ ಅವರು, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಪ್ರಬಂಧಕರಾದ ಶ್ರೀ ಚಂದ್ರಶೇಖರ್ ಅವರು, ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಶ್ರೀ ಶರತ್ ಅವರು ಸೇರಿದಂತೆ ಬ್ಯಾಂಕಿನ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.