ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂತು ಆಂಬ್ಯುಲೆನ್ಸ್!

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂತು ಆಂಬ್ಯುಲೆನ್ಸ್!

Share

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಆಂಬ್ಯುಲೆನ್ಸ್‌ ಸೇವೆ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿತ್ತು. ಈ ಬಿಕ್ಕಟ್ಟಿನ ಕುರಿತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ಒಂದು ದಿನದ ನಂತರ, ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಎದುರಿಸುತ್ತಿದ್ದ ಸವಾಲನ್ನು ಪರಿಹರಿಸಲು ಕೊನೆಗೂ ಆಂಬ್ಯುಲೆನ್ಸ್ ಅನ್ನು ಒದಗಿಸಲಾಗಿದೆ.‘ಚಾಮರಾಜನಗರದ ಗಡಿ ಗ್ರಾಮಗಳಲ್ಲಿ ಆಂಬ್ಯುಲೆನ್ಸ್‌ಗಳ ಕೊರತೆ’ ಎಂಬ ಶೀರ್ಷಿಕೆಯಡಿ ಟಿಎನ್‌ಐಇ ಬುಧವಾರ ವರದಿ ಪ್ರಕಟಿಸಿತ್ತು. ಕಳೆದ ಆರು ತಿಂಗಳಿಂದ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಂಡಿತ್ತು. ಇದರಿಂದ ಗಡಿ ಗ್ರಾಮಗಳ ರೋಗಿಗಳನ್ನು ತುರ್ತು ಪರಿಸ್ಥಿತಿಯಲ್ಲಿ ತೊಂದರೆಗೆ ಸಿಲುಕುವಂತೆ ಮಾಡಿತ್ತು.

ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮದ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಲಭ್ಯವಿರದಿರುವುದು ಪರಿಸ್ಥಿತಿಯ ಗಂಭೀರತೆಗೆ ಹಿಡಿದ ಕನ್ನಡಿಯಾಗಿತ್ತು. ಈ ಬಗ್ಗೆ ಆಶಾ ಕಾರ್ಯಕರ್ತೆಯರಿಂದ ಮಾಹಿತಿ ಪಡೆದ ಸಾಮಾಜಿಕ ಕಾರ್ಯಕರ್ತೆಯರೊಬ್ಬರು ತಮ್ಮ ಖಾಸಗಿ ಕಾರಿನಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು, ಮಾರ್ಗ ಮಧ್ಯೆಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದರು.ಈ ವರದಿಗೆ ಪ್ರತಿಕ್ರಿಯಿಸಿದ ಆರೋಗ್ಯ ಆಯುಕ್ತ ಡಿ ರಂದೀಪ್, ಹನೂರಿನಲ್ಲಿ ತುರ್ತು ಸೇವೆಗಳಿಗಾಗಿ ಈಗ ಡಿಬಿ ಕುಪ್ಪೆ ಪಿಎಚ್‌ಸಿಯಿಂದ ಆಂಬ್ಯುಲೆನ್ಸ್ ಸೇವೆಯನ್ನು ಒದಗಿಸಲಾಗಿದೆ ಎಂದು ಗುರುವಾರ ಮಾಹಿತಿ ನೀಡಿದರು.


Share