ಚಿಕ್ಕಮಗಳೂರು: ಲಾರಿ – ಓಮಿನಿ ಕಾರು ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಚಿಕ್ಕಮಗಳೂರು: ಲಾರಿ – ಓಮಿನಿ ಕಾರು ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎನ್ನಲಾಗಿದೆ.

ಕುಟುಂಬವೊಂದು ಎರಡು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿತ್ತು. ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಾಪಾಸ್ ಬರುತ್ತಿದ್ದಾಗ ಓಮಿನಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


Share