ಡೆವಿಲ್ ಸಿನಿಮಾ ಬಗ್ಗೆ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ತಮ್ಮ ಮುಂದಿನ ಡೆವಿಲ್ ಚಿತ್ರದ ರಿಲೀಸ್ ಬಗ್ಗೆ ದರ್ಶನ್ ಮಾಹಿತಿ ಹಂಚಿಕೊಂಡಿದ್ದಾರೆ.
ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ. ‘ಡೆವಿಲ್’ (Devil) ಚಿತ್ರವು ಇದೇ ಕ್ರಿಸ್‌ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ ಎಂದು ದರ್ಶನ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ.ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ರಚನಾ ರೈ (Rachana Rai) ಅವರು ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ವಿಚಾರವನ್ನು ಕಳೆದ ವಾರ ಚಿತ್ರತಂಡ ಅನೌನ್ಸ್ ಮಾಡಿದ್ದರು. ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬಂದ ‘ವಾಮನ’ ಚಿತ್ರಕ್ಕೆ ನಾಯಕಿಯಾಗಿದ್ದರು. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.