ತಹಶೀಲ್ದಾರ್ ಸಮ್ಮುಖದಲ್ಲಿ ಗಾಂಡ್ಲಹಳ್ಳಿ ಗ್ರಾಮದಲ್ಲಿ ಒತ್ತುವರಿ ರಸ್ತೆ ತೆರವು

ತಹಶೀಲ್ದಾರ್ ಸಮ್ಮುಖದಲ್ಲಿ ಗಾಂಡ್ಲಹಳ್ಳಿ ಗ್ರಾಮದಲ್ಲಿ ಒತ್ತುವರಿ ರಸ್ತೆ ತೆರವು

Share

ಶ್ರೀನಿವಾಸಪುರ : ತಾಲ್ಲೂಕಿನ ಗಾಂಡ್ಲಹಳ್ಳಿ ಗ್ರಾಮದ ಎಸ್ ಸಿ ಕಾಲೋನಿಗೆ ಎಸ್ ಸಿ ಸಮುದಾಯದ ಪ್ರಭಾವಿ ವ್ಯಕ್ತಿಯೋರ್ವ
ರಸ್ತೆ ಒತ್ತುವರಿ ಮಾಡಿಕೊಂಡು ರಸ್ತೆಗೆ ಅಡ್ಡಲಾಗಿ ಮನೆ ನಿರ್ಮಾಣ ಮಾಡಿ ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳು ಮನೆಗಳಿಗೆ ಹೋಗಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆಯೆಂದು ಆರೋಪಿಸಿ ಸ್ಥಳೀಯ ನಿವಾಸಿಗಳಾದ ವಕೀಲ ಮಂಜುನಾಥ್ ತಾಲ್ಲೂಕು ದಂಡಾಧಿಕಾರಿಗಳಿಗೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಮಾಸ್ತೇನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹಲವು ಬಾರಿ ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿ ದೂರು ನೀಡಿ ಮನವಿ ಮಾಡಿದ್ದರು.ರಸ್ತೆ ಸಮಸ್ಯೆ ಕುರಿತು ದೂರು ಸ್ವೀಕರಿಸಿದ ತಾಲ್ಲೂಕು ದಂಡಾಧಿಕಾರಿಗಳು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳ ಹಂತದಲ್ಲಿ ತನಿಖೆ ನಡೆದು ದೂರುದಾರರ ಹಾಗೂ ಮನೆ ಮಾಲೀಕರ ದಾಖಲೆಗಳನ್ನು ಪರಿಶೀಲಿಸಿದ ನಂತರ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು ಮನೆ ಮಾಲೀಕರಿಗೆ ಕಟ್ಟಡ ನಿರ್ಮಾಣ ಹಂತದಲ್ಲಿದ್ದ ಜಾಗದಲ್ಲಿ ರಸ್ತೆಗೆ ಗುರಿತಿಸಿದ ಜಾಗವನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದರು ಆದೇಶ ಹೊರಡಿಸಿದ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಜೂನ್ 26ರಂದು ಬಿಗಿ ಪೊಲೀಸ್ ಭದ್ರತೆಯ ನಡುವೆ ತಾಲ್ಲೂಕು ದಂಡಾಧಿಕಾರಿಗಳಾದ ಸುಧೀಂದ್ರ ಹಾಗೂ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಎಂ ಎನ್ ರವಿ ಮಾಸ್ತೇನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಪೊಲೀಸ್ ಇನ್ಸ್ಪೆಕ್ಟರ್ ಜಯಾನಂದ್ ರವರ ಸಮ್ಮುಖದಲ್ಲಿ ಒತ್ತುವರಿ ತೆರವು ಗೊಳಿಸಲಾಯಿತು ಒತ್ತುವರಿ ತೆರವುಗೊಳಿಸುವ ಸಂದರ್ಭದಲ್ಲಿ ದೂರುದಾರ ಮನೆ ಮಾಲೀಕನ ನಡುವೆ ಮಾತಿನ ಚಕಮಕಿ ಸಹಾ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಧೀಂದ್ರ , ಇ ಒ ಎಂ ಎನ್ ರವಿ,ಪೊಲೀಸ್ ಇನ್ಸ್ಪೆಕ್ಟರ್ ಜಯಾನಂದ್ , ಸಬ್ ಇನ್ಸ್ಪೆಕ್ಟರ್ ಜಯರಾಮ್ ಸೇರಿ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು .


Share