ಬೆಂಗಳೂರು; ಬರಗಾಲ ಹಾಗೂ ಕುಡಿಯುವ ನೀರಿ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರು ಮತ್ತು ಇತರ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಇತ್ತೀಚೆಗೆ ನೀಡಿರುವ ಮುನ್ಸೂಚನೆಯೊಂದು ಭರವಸೆಯ ಆಶಾಭಾವವನ್ನು ಮೂಡಿಸಿದೆ.
ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಆಗಲಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ನೀರಿನ ಕೊರತೆಯನ್ನು ನಿವಾರಿಸಲು ಇದು ಗಮನಾರ್ಹವಾಗಿ ಸಹಾಯ ಮಾಡುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಮೇ 31 ರಿಂದ ರಾಜ್ಯದಲ್ಲಿ ಮಾನ್ಸೂನ್ ಪ್ರಾರಂಭವಾಗಲಿದ್ದು, ಜೂನ್ 5 ರ ಸುಮಾರಿಗೆ ಎಲ್ಲೆಡೆ ಮಳೆ ಆರಂಭವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಮೇ 31 ರವರೆಗೆ ಪ್ರತ್ಯೇಕ ಮತ್ತು ಅಲ್ಲಲ್ಲಿ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ.
ಈ ವರ್ಷ, ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗಲಿದೆ. ಆದಾಗ್ಯೂ, ಚಂಡಮಾರುತಗಳಿಂದ ಬದಲಾವಣೆಗಳಾದರೆ ಮುಂಗಾರು ಇನ್ನೂ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.