ವಿಧಾನಪರಿಷತ್ ಚುನಾವಣೆ: ಒಗ್ಗಟ್ಟು ಪ್ರದರ್ಶನಕ್ಕೆ ‘ಕೈ’ ಪಡೆಗೆ ತಾಕೀತು

ವಿಧಾನಪರಿಷತ್ ಚುನಾವಣೆ: ಒಗ್ಗಟ್ಟು ಪ್ರದರ್ಶನಕ್ಕೆ ‘ಕೈ’ ಪಡೆಗೆ ತಾಕೀತು

Share

ಮೈಸೂರು: ಮುಂಬರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಗೆಲ್ಲಲು ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಬಿರುಸಿನ ಪ್ರಚಾರ ನಡೆಸಿ, ಮತದಾರರನ್ನು ತಲುಪಬೇಕು ಎಂದು ಜಿಲ್ಲಾ ಸಚಿವ ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಹೇಳಿದರು.

ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು. ಲೋಕಸಭೆ ಚುನಾವಣೆಯಲ್ಲೂ ಇದೇ ಪ್ರದರ್ಶನ ಪುನರಾವರ್ತನೆಯಾಗಿದೆ. ಇದೀಗ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಗೆಲುವು ಸಾಧಿಸುವುದು ಪಕ್ಷಕ್ಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಮತ್ತು ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಮತದಾರರನ್ನು ಸಂಪರ್ಕಿಸಬೇಕು ಮತ್ತು ಶಿಕ್ಷಕರೊಂದಿಗೆ ಸಭೆ ನಡೆಸಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಪ್ರಯತ್ನ ಮಾಡಬೇಕು, ಪಕ್ಷದ ಅಭ್ಯರ್ಥಿ ಮರಿತ್ಬ್ಬೇಗೌಡ ಅವರೊಂದಿಗೆ ಸಮನ್ವಯ ಸಾಧಿಸಿ ನಾಲ್ಕು ಜಿಲ್ಲೆಗಳ ಮತದಾರರನ್ನು ತಲುಪಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ತಿಮ್ಮಯ್ಯ, ದಿನೇಶ್ ಗೂಳಿಗೌಡ, ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.


Share