ನಾಡಿಗೆ ಕೆಂಪೇಗೌಡರ ಕೊಡುಗೆ ಅನನ್ಯ

ನಾಡಿಗೆ ಕೆಂಪೇಗೌಡರ ಕೊಡುಗೆ ಅನನ್ಯ

Share

ಕಲಬುರಗಿ:- ದೇಶದ ಹೆಮ್ಮೆಯ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರು ನೂರಾರು ವರ್ಷಗಳ ಹಿಂದೆಯೇ ಉತ್ತಮ ರಸ್ತೆಗಳ ನಿರ್ಮಾಣ, ಅನೇಕ ಕೆರೆ-ಬಾವಿಗಳ ನಿರ್ಮಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡುವ ಮೂಲಕ ನಾಡಿಗೆ ತಮ್ಮದೇ ಆದ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು.ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜರುಗಿದ’ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಮಾತನಾಡುತ್ತಿದ್ದ ಅವರು, ಇಂದು ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತದೆಂದರೆ, ಅದಕ್ಕೆ ನೂರಾರು ವರ್ಷಗಳ ಹಿಂದೆ ಕೆಂಪೇಗೌಡರು ಅದರ ಅಭಿವೃದ್ಧಿಗೆ ನೀಡಿದ ಶ್ರಮ ಆಧಾರವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಆಸ್ಮಾಜಬೀನ್, ನಯಿಮಾ ನಾಹಿದ್, ಶರಣಮ್ಮ ಭಾವಿಕಟ್ಟಿ, ಮಲ್ಲಿಕಾರ್ಜುನ ದೊಡ್ಡಮನಿ, ಮಲ್ಲಪ್ಪ ರಂಜಣಗಿ, ಎಚ್.ಬಿ.ಪಾಟೀಲ, ಶಂಕ್ರೆಪ್ಪ ಹೊಸದೊಡ್ಡಿ, ರೇಣುಕಾ ಚಿಕ್ಕಮೇಟಿ, ಮಲ್ಲಿಕಾರ್ಜುನ ಆನಂದಕರ್, ಶಿಕ್ಷಕ ಬಸವರಾಜ ಹಡಪದ, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದರು, ‌ ವರದಿ-ಡಾ ಎಂ ಬಿ ಹಡಪದ ಸುಗೂರ ಎನ್


Share