ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಆವಲಹಳ್ಳಿ ಪೊಲೀಸ್ ವ್ಯಾಪ್ತಿಯ ಸಾಯಿ ಸೆರಿನಿಟಿ ಲೇಔಟ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವವೊಂದು ಸೋಮವಾರ ಪತ್ತೆಯಾಗಿದೆ.
ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಮೃತದೇಹವನ್ನು ಪತ್ತೆ ಮಾಡಿದ್ದರು. ಸಂಜೆ 4 ಗಂಟೆ ಸುಮಾರಿಗೆ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿ ನೋಡಿದಾಗ ಸಾಯಿ ಸೆರಿನಿಟಿ ಲೇಔಟ್ ಬಳಿ ಸುಮಾರು 40 ವರ್ಷ ವಯಸ್ಸಿನ ಶವ ಪತ್ತೆಯಾಗಿತ್ತು.ವ್ಯಕ್ತಿಯ ತಲೆಗೆ ಗಾಯಗಳಾಗಿದ್ದು, ದೇಹ ಕೊಳೆತಿದ್ದರಿಂದ ಶನಿವಾರ ಸಾವನ್ನಪ್ಪಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಮೃತದೇಹದ ಗುರುತು ಪತ್ತೆಯಾಗಲಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.