ಸಂದರ್ಶನ| TMC ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ; ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ: ಪ್ರಧಾನಿ ಮೋದಿ

Share

ಲೋಕಸಭೆ ಚುನಾವಣೆ 2024ರ ಚುನಾವಣಾ ಪ್ರಕ್ರಿಯೆ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತಿ ಹೆಚ್ಚು ಲಾಭ ಗಳಿಸುವ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಏಕಪಕ್ಷೀಯವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಎಂದರು.ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, 2024 ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷದ ಸಾಧನೆಯ ಬಗ್ಗೆ ಮಾತನಾಡಿದರು. ರಾಜ್ಯದಲ್ಲಿ ಪಕ್ಷವು ಗರಿಷ್ಠ ಯಶಸ್ಸನ್ನು ಪಡೆಯುತ್ತದೆ ಎಂದು ಹೇಳಿದರು.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ, ಟಿಎಂಸಿ ಪಕ್ಷ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀವು ಅದನ್ನು ನೋಡಿರಬೇಕು, ನಮಗೆ ಮೂರು ಸ್ಥಾನಗಳಿದ್ದವು. ಬಂಗಾಳದ ಜನರು ನಮ್ಮನ್ನು ಮೂರರಿಂದ 80 ಕ್ಕೆ ತೆಗೆದುಕೊಂಡು ಹೋದರು. ಲೋಕಸಭೆಯಲ್ಲಿ ನಮಗೆ ಸಾಕಷ್ಟು ಬೆಂಬಲ ಸಿಕ್ಕಿತು. ಕಳೆದ ಬಾರಿಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯಂತ ಉತ್ತಮ ಪ್ರದರ್ಶನ ನೀಡಿದೆ. 2019 ರಲ್ಲಿ, ಬಿಜೆಪಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಭದ್ರಕೋಟೆಗೆ ಪ್ರಬಲವಾದ ಪ್ರವೇಶವನ್ನು ಮಾಡಿತು. 22 ಸ್ಥಾನಗಳನ್ನು ಗೆದ್ದ ರಾಜ್ಯದ ಆಡಳಿತ ಪಕ್ಷಕ್ಕೆ ಹತ್ತಿರದಲ್ಲಿದೆ ಎಂದರು.2010 ರ ನಂತರ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್‌ನ ತೀರ್ಪಿನ ಮೇಲೆ ತೃಣಮೂಲ ಕಾಂಗ್ರೆಸ್‌ನ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ತೃಣಮೂಲ ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಅನುಮತಿ ನೀಡದ ಧರ್ಮಾಧಾರಿತ ಮೀಸಲಾತಿ ನೀಡುತ್ತಿದೆ ಎಂದರು.

ಒಬಿಸಿ ಪ್ರಮಾಣಪತ್ರಗಳ ಕುರಿತು ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ ಅವರು ಮಮತಾ ಬ್ಯಾನರ್ಜಿಯವರು ನ್ಯಾಯಾಂಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಲೋಕಸಭೆ ಚುನಾವಣೆಯ ಆರು ಹಂತಗಳು ಇಲ್ಲಿಯವರೆಗೆ ಪೂರ್ಣಗೊಂಡಿದ್ದು, ಜೂನ್ 1 ರಂದು 8 ರಾಜ್ಯಗಳ 57 ಕ್ಷೇತ್ರಗಳಲ್ಲಿ ಅಂತಿಮ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.


Share