ಬೆಂಗಳೂರು: ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ..!

ಬೆಂಗಳೂರು: ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ..!

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ನಟ ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಹಾಗೂ ಆಪ್ತ ಪ್ರಶಾಂತ್ ಪೂಜಾರಿ ಅವರ ಮೇಲೆ ಹಲ್ಲೆ ನಡೆದಿರುವ ಘಟನೆ ನಗರದ ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಭಾನುವಾರ ನಡೆದಿದೆ.

ಅಪರಿಚಿತರು ಬೈಕ್​ನಲ್ಲಿ ಬಂದು ಪ್ರಶಾಂತ್​ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಬಗ್ಗೆ ಬನಶಂಕರಿ ಪೊಲೀಸರಿಗೆ ಪ್ರಶಾಂತ್ ಮಾಹಿತಿ ನೀಡಿದ್ದು, ಸದ್ಯ ಅವರು​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆ ಸಂಬಂಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕಿಡಿಗೇಡಿಗಳು ಲಾಂಗ್ ನಲ್ಲಿ ಪ್ರಶಾಂತ್ ಕಾಲಿಗೆ ಹೊಡೆದಿದ್ದಾರೆ. ಕಾಲಿಗೆ 15 ಸ್ಟಿಚ್ ಹಾಕಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆಸ್ಪತ್ರೆಗೆ ಬಂದು ಪ್ರಶಾಂತ್ ಹೇಳಿಕೆ ದಾಖಲಿಸಿದ್ದಾರೆ.ಹಾಕಿ ಸ್ಟಿಕ್, ಮಚ್ಚು ಲಾಂಗ್ ಗಳಿಂದ ಪ್ರಶಾಂತ್ ಮೇಲೆ ಹಲ್ಲೆ ಮಾಡಲಾಗಿದೆ. ಲವ್ ಕೇಸ್ ನಲ್ಲಿ ಪ್ರಶಾಂತ್ ಮೇಲೆ ಹಲ್ಲೆ ಆಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ನಟ ಧ್ರುವ ಸರ್ಜಾ ಅವರು, ವೈಯಕ್ತಿಕ ವಿಚಾರಕ್ಕೆ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ಆತ ನಮ್ಮ ಹುಡುಗ, ಅವನ ಜೊತೆಗಿರುತ್ತೇನೆ ಎಂದು ಹೇಳಿದ್ದಾರೆ.

ನಟ ಧ್ರುವ ಸರ್ಜಾ ಕಟ್ಟುಮಸ್ತಾದ ದೇಹ ಹೊಂದಿದ್ದು, ಅವರು ನಿತ್ಯ ಜಿಮ್ ಮಾಡುತ್ತಾರೆ. ಇದಕ್ಕೆ ಅವರ ಜಿಮ್ ಟ್ರೇನರ್ ಪ್ರಶಾಂತ್ ಕೊಡುಗೆಯೂ ಇದೆ.


Share