ವಿಡಿಯೋ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ!

ವಿಡಿಯೋ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ!

Share

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು. ಇದೀಗ ರೇವಣ್ಣ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿದ್ದಾರೆ.

ಮೇ 31ರಂದು ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಮೇ 31ರ ಬೆಳಗ್ಗೆ 10:30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಆದರೆ ಪ್ರಜ್ವಲ್​ ರೇವಣ್ಣ ಟಿಕೆಟ್ ಬುಕ್ ಮಾಡಿರುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಆಗಮಿಸಲಿರುವುದರಿಂದ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಪ್ರಜ್ವಲ್​ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರಣೆ ನಡೆಸುತ್ತಿರುವ ಎನ್ಐಟಿ ತಂಡ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ. ಸದ್ಯ ಪ್ರಜ್ವಲ್ ರೇವಣ್ಣ ಯಾವ ವಿಮಾನದಲ್ಲಿ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದೆ ಎಂಬ ಮಾಹಿತಿಯನ್ನು ಕಲೆಹಾಕುತ್ತಿದೆ.

ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋ ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಂಗಳವಾರ ಸೆಕ್ಸ್ ಹಗರಣದ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ಹಂಚಿದ್ದ ಆರೋಪ ಎದುರಿಸುತ್ತಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆಯುವ ನಿಟ್ಟಿನಲ್ಲಿ ಹೈಕೋರ್ಟ್‌ಗೆ ಬಂದಾಗ ಅವರನ್ನು ಬಂಧಿಸಲಾಗಿದೆ. ಬಂಧಿತರನ್ನು ನವೀನ್ ಗೌಡ ಮತ್ತು ಚೇತನ್ ಎಂದು ಗುರುತಿಸಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.


Share