ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ದಿನಾಂಕ1/7/2024 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಬಸಯ್ಯ ಎಸ್ ಸಾಲಿಮಠ ಮುಖ್ಯ ಗುರುಗಳ ಸೇವಾ ನಿವೃತ್ತಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು ಅದೇ ರೀತಿಯಾಗಿ 2023 – 24ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಬಿಳವಾರ ಗ್ರಾಮ ಪಂಚಾಯತ್ ಕಾರ್ಯಾಲಯದ ವತಿಯಿಂದ ಮತ್ತು ತಾಲೂಕಿನ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಎಸ್ ನರಿಬೋಳ್ ಅಭಿಮಾನಿ ಬಳಗದ ವತಿಯಿಂದ ಮುಖ್ಯ ಗುರುಗಳಿಗೆ ಸೆವಾ ನಿವೃತ್ತಿಯ ಕಾರ್ಯಕ್ರಮದ ಪ್ರಯುಕ್ತ ಅದ್ದೂರಿಯ ಸನ್ಮಾನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು ಶಾಲಾ ಸಿಬ್ಬಂದಿ ವರ್ಗದವರು ಸುತ್ತಮುತ್ತಲಿನ ಗ್ರಾಮಸ್ಥರು ಶಾಲೆಯ ಹಳೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಸಮಾಜ ಸೇವಕರಾದ ಹಣಮಂತ ಬಿ ದಂಡಗುಲ್ಕರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ