ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಡ್ಯಾಮ್ ಸೈಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಓಮ್ಮಿ ಮತ್ತು ಟೂರಿಸ್ಟ್ ಬಸ್ ನಡುವೆ ಅಪಘಾತ ಸಂಭವಿಸಿ ಓಮ್ಮಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.ಭಟ್ಕಳದ ಅಬ್ದುಲ್ ವಾಜಿದ್ (37) ಮೃತಪಟ್ಟ ಓಮ್ಮಿ ಚಾಲಕ. ಇವರು ಓಮ್ಮಿಯಲ್ಲಿ ತಮ್ಮ ಪತ್ನಿಯೊಂದಿಗೆ ಭಟ್ಕಳದಿಂದ ಗೇರುಸೊಪ್ಪಾ ಮಾರ್ಗದಲ್ಲಿ ಸಾಗರಕ್ಕೆ ಹೋಗುತ್ತಿದ್ದರು. ಗೇರುಸೊಪ್ಪ ಡ್ಯಾಮ್ ಸೈಟ್ ಸಮೀಪ ಎದುರಿನಿಂದ ಬಂದ ಟೂರಿಸ್ಟ್ ಬಸ್ ಡಿಕ್ಕಿಯಾಗಿದೆ.ಅಪಘಾತದಲ್ಲಿ ಗಾಯಗೊಂಡ ಅಬ್ದುಲ್ ವಾಜಿದ್ ಅವರನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಪತ್ನಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಓಮಿನಿ ಕಾರ್ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.