ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಸ್‌ಎಫ್‌ಎಲ್) ಅಧಿಕಾರಿಗಳು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಮಂಗಳವಾರ ರಾತ್ರಿ ಭೇಟಿ ನೀಡಿದರು.
ಬುಧವಾರ ಬೆಳಗ್ಗೆ 10 ಗಂಟೆಯವರೆಗೆ ಕ್ವಾರ್ಟರ್ಸ್‌ನಲ್ಲಿದ್ದ ಅಧಿಕಾರಿಗಳು, ಬುಧವಾರ ಬೆಳಗ್ಗೆ 4.50ರವರೆಗೆ ವಿವಿಧ ಮಾದರಿಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಎಸ್‌ಐಟಿ ಮತ್ತು ಎಫ್‌ಎಸ್‌ಎಲ್ ಜಂಟಿಯಾಗಿ 10 ಗಂಟೆಗಳ ಕಾಲ ನಿರಂತರವಾಗಿ ಕ್ವಾರ್ಟರ್ಸ್ ತಪಾಸಣೆ ನಡೆಸಿತು.ಪ್ರಜ್ವಲ್ ಮಲಗುತ್ತಿದ್ದ ಮೂರು ಬೆಡ್‌ರೂಮ್‌ಗಳಿಂದ ಬೆಡ್‌ಗಳು, ಬೆಡ್‌ಶೀಟ್‌ಗಳು, ಬ್ಲಾಂಕೆಟ್‌ಗಳು, ನ್ಯಾಪ್‌ಕಿನ್‌ಗಳು ಮತ್ತು ಬಟ್ಟೆಗಳನ್ನು ಸಂಗ್ರಹಿಸಿದೆ.
ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಎಫ್‌ಎಸ್‌ಎಲ್ ಅಧಿಕಾರಿಗಳು ಬೆರಳಚ್ಚುಗಳ ಛಾಯಾಚಿತ್ರಗಳನ್ನೂ ತೆಗೆದುಕೊಂಡರು. ಮೇ 31ರಂದು ಪ್ರಜ್ವಲ್ ಭಾರತಕ್ಕೆ ವಾಪಸಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತೀವ್ರ ನಿಗಾ ವಹಿಸಿದೆ.
ಅಧಿಕಾರಿಗಳು ಎರಡನೇ ಬಾರಿಗೆ ಪ್ರಜ್ವಲ್ ರೇವಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಹಿಂದೆ ಮೇ ಮೊದಲ ವಾರದಲ್ಲಿ ಪ್ರಜ್ವಲ್ ಅವರ ತಂದೆ ಹೆಚ್‌ಡಿ ರೇವಣ್ಣ ಅವರ ವಿರುದ್ಧ ಕಿಡ್ನ್ಯಾಪ್ ಮತ್ತು ಲೈಂಗಿಕ ಕಿರುಕುಳದ ಪ್ರಕರಣದ ಸಂದರ್ಭದಲ್ಲಿಯೂ ಭೇಟಿ ನೀಡಿದ್ದರು. ಮನೆಯಲ್ಲಿ ಏನೆಲ್ಲಾ ವಸ್ತುಗಳನ್ನು ತೆಗೆದುಕೊಳ್ಳಲಾಯಿತು ಎಂಬುದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಅಧಿಕಾರಿಗಳು ನಿರಾಕರಿಸಿದರು.