ಶಿವಮೊಗ್ಗ: ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಬಿ. ವೈ. ವಿಜಯೇಂದ್ರ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಮಧ್ಯೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಸರ್ಕಾರ 2 ಲಕ್ಷ ರೂ. ಪರಿಹಾರ ನೀಡಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಮೇಲ್ನೋಟಕ್ಕೆ ಕಾಣುವಂತೆ ಇದು ಬರೀ ನಿಗಮದ ಅತ್ಮಹತ್ಯೆ ಪ್ರಕರಣ ಅಲ್ಲ. ಇದರ ಹಿಂದೆ ದೊಡ್ಡ ಕುಳಗಳ ಕೈವಾಡದ ಶಂಕೆಯಿದೆ. ಸಚಿವರ ಗಮನಕ್ಕೆ ಬಾರದೇ ಇಷ್ಟೊಂದು ದೊಡ್ಡ ಅವ್ಯವಹಾರ ನಡೆಯಲು ಸಾಧ್ಯವೇ ಇಲ್ಲ. ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಪಾರದರ್ಶಕ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ನೂರಾರು ಕೋಟಿ ರೂ. ಹಣ ಲೋಕಸಭೆ ಚುನಾವಣೆಗೆ ಮುನ್ನ ಅಕ್ರಮವಾಗಿ ತೆಲಂಗಾಣಕ್ಕೆ ವರ್ಗಾವಣೆ ಆಗಿದೆ ಎಂದು ಅವರು ಆರೋಪಿಸಿದರು.