ದಾವಣಗೆರೆ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ರಾಜ್ಯ ಹಾಗೂ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬೆನ್ನಲ್ಲೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಈ ಪ್ರಕರಣವು ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ನೀಡಿದಂತಾಗಿದೆ.
ಪಿ.ಎಸ್. ಗೌಡರ್ (50) ಮೇ 26 ರಂದು ಮನೆಯಲ್ಲಿನ ಫ್ಯಾನ್‌ಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಡೆತ್‌ನೋಟ್ ಬರೆದಿಟ್ಟಿದ್ದಾರೆ.ಡೆತ್‌ನೋಟ್’ನಲ್ಲಿ ಕೆಆರ್‌ಐಡಿಎಲ್ ಕಾಮಗಾರಿ ನಡೆಸಿದ ಹಣ ಬಂದಿಲ್ಲ ಎಂಬುದು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದಾರೆ. ಇದನ್ನು ಆಧರಿಸಿ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಬೆನ್ನಲ್ಲೇ ಕೆಆರ್‌ಐಡಿಎಲ್ (ಲ್ಯಾಂಡ್ ಆರ್ಮಿ) ಸಂಸ್ಥೆ ಸೇರಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.