ಮೈಸೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಲ್ಪಾ ಶೆಟ್ಟಿ, ಮೈಸೂರಿನ ಇಲವಾಲದಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಂದಿದ್ದೆ. ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಬಗ್ಗೆ ಬಹಳವಾಗಿ ಕೇಳಿದ್ದೆ. ಇಂದು ದೇವರ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು ಎಂದು ಹರ್ಷ ವ್ಯಕ್ತಪಡಿಸಿದರು.ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ಪರಭಾಷೆಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಅವರಂತಹ ಘಟಾನುಘಟಿ ಕಲಾವಿದರು ‘ಕೆಡಿ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಮೈಸೂರಿನಲ್ಲಿ ಶಿಲ್ಪಾ ಶೆಟ್ಟಿ ‘ಕೆಡಿ’ ಚಿತ್ರದ ಶೂಟಿಂಗ್ ನಲ್ಲಿ ಭಾಗಿ ಆಗಿದ್ದಾರೆ.