ಹೊನ್ನಾವರ: ತಾಲೂಕಿನ ಶರಾವತಿ ಸೇತುವೆಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬಿಜಾಪುರದಿಂದ ಮಂಗಳೂರು ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್, ಹಾಗೂ ಮಂಕಿ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಮಂಗಳವಾರ ಮುಂಜಾನೆ ನಸುಕಿನ ಜಾವ 4 ಗಂಟೆಗೆ ಘಟನೆ ನಡೆದಿದ್ದು, ತಾಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ, ಸಂಶಿಯ ಗೌರೀಶ್ ನಾಯ್ಕ, ಖರ್ವಾದ ರಮೇಶ್ ನಾಯ್ಕ ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ.
ಇನ್ನೂ ಈ ಘಟನೆಗೆ ಹೆದ್ದಾರಿಯನ್ನು ದ್ವಿಪಥವನ್ನು ಏಕಪಥವಾಗಿ ಸಂಚಾರ ಕಲ್ಪಿಸಿದ್ದೇ ಈ ಘಟನೆಗೆ ಮುಖ್ಯ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸಿದ್ದಾರೆ.
