ಉಡುಪಿ ಕಾಪು ತಾಲ್ಲೂಕ”ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಉಡುಪಿ ಕಾಪು ತಾಲ್ಲೂಕ”ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಆದ್ಯ ವಚನಕಾರ ದಾಸಿಮಯ್ಯನವರು ವಚನ ಗಾರುಡಿಗ; ಅವರ ತತ್ವಾದರ್ಶಗಳು ಸಾರ್ವಕಾಲಿಕ ಪ್ರಸ್ತುತತೆ ಹೊಂದಿವೆ ತಹಶಿಲ್ದಾರ್ ಡಾ.ಪ್ರತಿಭಾ ಆರ್. ದೇವರ ದಾಸಿಮಯ್ಯನವರು ಸಮಾಜದ ಅಂಕುಡೊಂಕು ತಿದ್ದಿದ ಮಹಾನ್ ವಚನಕಾರ ಕಾಪು ತಾಲ್ಲೂಕಿನಲ್ಲಿ “ದೇವರ ದಾಸಿಮಯ್ಯ ಜಯಂತಿಯನ್ನು” ತಹಶಿಲ್ದಾರ್ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಸಮಾರಂಭದ ಅಧ್ಯಕ್ಷತೆಯನ್ನು ಮಾನ್ಯ ತಹಶೀಲ್ದಾರ್ ಡಾ.ಪ್ರತಿಭಾ.ಆರ್. ಅವರು ವಹಿಸಿಕೊಂಡಿದ್ದರು. ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಜ್ಯೋತಿ ಬೆಳಗಿಸಿ ಗೌರವ ಸಲ್ಲಿಸಿ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಮಾತನಾಡಿದರು.ದೇವರ ದಾಸಿಮಯ್ಯನವರು ಸಮಾಜ ಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ. ಎಲ್ಲರೂ ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬೆಳೆಯಬೇಕು ಎಂದು ಕರೆ ನೀಡಿದರು. ಈ ಮಹಾತ್ಮರು ಗಾಯತ್ರೀ ಮಂತ್ರದ ಉಪಾಸಕರಾಗಿ, ಅದರ ಮಹಿಮೆಯನ್ನು ಸಾರಿದರು. ಪ್ರತಿಯೊಬ್ಬ ಮಾನವನು, ಉತ್ತಮ ಸಂಸ್ಕೃತಿ, ಧರ್ಮ, ಆಚಾರವಾಗಿ ನಡೆಸಬೇಕೆಂಬ ಸಂದೇಶವನ್ನು ತಮ್ಮ ವಚನಗಳ ಮೂಲಕ ದಾಸಿಮಯ್ಯ ಪ್ರಪಂಚಕ್ಕೆ ತಿಳಿಸಿ ಹೇಳಿದರು. ಇನ್ನು ದೇವಾಂಗ ದಾಸಿಮಯ್ಯರ ಕೃತಿ ಪರಿಚಯಕ್ಕೆ ಬಂದರೆ, ರಾಮನಾಥ ಎಂಬ ನಾಮಾಂಕಿತದಿಂದ ಅನೇಕ ವಚನಗಳನ್ನು ರಚಿಸಿದ್ದಾರೆ. ದೇವಲರು, ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಶರಣರಿಗಿಂತಲೂ (ಬಸವಣ್ಣ ಮತ್ತು ಅಕ್ಕಮಹಾದೇವಿಯವರಿಗೂ) ಮುಂಚಿತವಾಗಿ ದ್ದಂತಹ ಮೊಟ್ಟ ಮೊದಲ ವಚನಕಾರರು. ದಾಸಿಮಯ್ಯನವರ ವಚನಗಳು ಅರ್ಥೈಸಿಕೊಳ್ಳಲು ಬಹಳ ಸರಳವಾಗಿದ್ದು, ಸಮಾಜಕ್ಕೆ ವಿಶೇಷವಾದ ಧಾರ್ಮಿಕ ಪ್ರಜ್ಞೆಯ ಸ್ಪೂರ್ತಿಯ ಚಿಲುಮೆಯಾಗಿವೆ. ದೇವರ ದಾಸಿಮಯ್ಯನವರು ತಮ್ಮ ಆದ್ಯಾತ್ಮ ಸಿರಿವಂತಿಕೆಯಿಂದ ಮೆರೆದು, ಶಿವನ ಹೆಜ್ಜೆಯಲ್ಲಿ ಹೆಜ್ಜೆಯನಿಟ್ಟು, ತಮ್ಮ ಹೆಜ್ಜೆ ಪಾಡುಗಳನ್ನು ನಮಗಾಗಿ ಉಳಿಸಿಹೋಗಿದ್ದಾರೆ. ಇವುಗಳನ್ನು ಅನುಸರಿಸಿ ನಡೆದರೆ ಸಾಕು ನಮ್ಮ ಬಾಳು ಬೆಳಕಾಗುವುದು ಎಂದು ತಹಶಿಲ್ದಾರ್ ಡಾ.ಪ್ರತಿಭಾ ಕರೆ ನೀಡಿದರು. ದೇವರ ದಾಸಿಮಯ್ಯನವರ ಉಪಲಬ್ಧ ವಚನಗಳಲ್ಲಿ ಉತ್ಕಟವಾದ ದೈವ ನಿಷ್ಠೆ, ನಿಷ್ಠುರವಾದ ಸ್ಪಷ್ಟ ವಾಕ್ಯತೆ, ಮಾರ್ಮಿಕವಾದ ಸಂಕ್ಷಿಪ್ತ ಶೈಲಿ, ಔಚಿತ್ಯಪೂರ್ಣವಾದ ದೃಷ್ಟಾಂತಗಳ ಸಂಪತ್ತಿಯ ಗುಣಗಳು ಎದ್ದು ಕಾಣುತ್ತವೆ. ದೇವರ ದಾಸಿಮಯ್ಯ ವಿಶ್ವದ ಪ್ರಥಮ ವಚನಕಾರ. ಅವರು ರಾಮನಾಥ ಎಂಬ ಹೆಸರಲ್ಲಿಯೇ 176 ವಚನಗಳನ್ನು ರಚಿಸಿದ್ದಾರೆ.
ಹಸಿವೆಂಬ ಹೆಬ್ಬಾವು ಬಸಿರ ಬಂದು ಹಿಡಿವಡೆ
ವಿಷವೇರಿತ್ತಯ್ಯ ಅಪಾದಮಸ್ತಕಕ್ಕೆ
ಹಸಿವಿಗನ್ನವನಿಕ್ಕಿ ವಿಷವನಿಳುಹಬಲ್ಲಡೆ
ವಸುಧೆಯೊಳಗೆ ಆತನೆ ಗಾರುಡಿಗ ಕಾಣಾ ರಾಮನಾಥಾ.
ಎಂದು ದಾಸಿಮಯ್ಯ ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಉಪತಹಶೀಲ್ದಾರರಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಇತರ ಸಿಬ್ಬಂದಿ ವರ್ಗದವರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ:ಡಾ.ನಂದುಪೂಜಾರಿ
ರಾಜ್ಯ ವರದಿಗಾರರು