ಮೈಸೂರು: 2025 ರ ದಸರಾ ಮಹೋತ್ಸವಕ್ಕೆ ಸಿದ್ದತೆ ಆರಂಭವಾಗಿದೆ.ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ಪಟ್ಟಿ ಬಿಡುಗಡೆಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.ಆನೆಗಳ ಶಿಬಿರಕ್ಕೆ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ತಪಾಸಣೆಗೆ ಮುಂದಾಗಿದ್ದಾರೆ.ಹೆಣ್ಣು ಆನೆಗಳ ಗರ್ಭದಾರಣೆ ಕುರಿತು ಸ್ಯಾಂಫಲ್ ಗಳನ್ನ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿದ್ದಾರೆ.ವರದಿ ಬಂದ ನಂತರ ತಾತ್ಕಾಲಿಕವಾಗಿ ಅಂತಿಮ ಪಟ್ಟಿ ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.ಸರ್ಕಾರದಿಂದ ಅನುಮೋದನೆ ಬಂದ ನಂತರ ಅರಣ್ಯ ಸಚಿವರು ಹಾಗೂ ಇಲಾಖೆ ಆದೇಶದ ನಂತರ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.ಒಟ್ಟಾರೆ 2025 ರ ದಸರಾ ಗೆ ಸಿದ್ದತೆ ಆರಂಭವಾಗಿದೆ..
