ನಂಜನಗೂಡು,ಜು3,Tv23 ಕನ್ನಡ
ನಂಜನಗೂಡು ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ವಿರುದ್ದ ಸಾರ್ವಜನಿಕರು ದೂರು ನೀಡಿದ್ದಾರೆ.ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟು ಮಾಡುವುದು ಹಾಗೂ ಬೆದರಿಕೆ ಹಾಕುತ್ತಾರೆ ಎಂದು ದೂರು ಸಲ್ಲಿಸಿರುವ ಹಿನ್ನಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ಈ ಸಂಭಂಧ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮೈಸೂರು ಉಪವಿಭಾಗಾಧಿಕಾರಿಗಳ ಕಚೇರಿಗೆ ಪತ್ರ ರವಾನೆ ಆಗಿದ್ದು ಅಗತ್ಯ ಕ್ರಮ ಕೈಗೊಂಡು ದೂರುದಾರರಿಗೆ ಮಾಹಿತಿ ನಂತರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.ಆದರೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪತ್ರ ರವಾನೆ ಆಗಿ ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಇದೆ.ಜಿಲ್ಲಾಧಿಕಾರಿಗಳ ಪತ್ರಕ್ಕೆ ಮನ್ನಣೆ ನೀಡದಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.
